ಭಾನುವಾರ, 24 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಪಿಎಸ್‌ ಕನಿಷ್ಠ ಪಿಂಚಣಿ ಹೆಚ್ಚಳ ಇಲ್ಲ

Published 4 ಆಗಸ್ಟ್ 2023, 23:37 IST
Last Updated 4 ಆಗಸ್ಟ್ 2023, 23:37 IST
ಅಕ್ಷರ ಗಾತ್ರ

ಬೆಂಗಳೂರು: ನೌಕರರ ಪಿಂಚಣಿ ಯೋಜನೆಯ (ಇಪಿಎಸ್‌) ಅಡಿಯಲ್ಲಿ ನೀಡುತ್ತಿರುವ ಕನಿಷ್ಠ ಪಿಂಚಣಿ ಮೊತ್ತವನ್ನು ಹೆಚ್ಚಿಸುವ ಯಾವುದೇ ಪ್ರಸ್ತಾವ ಕೇಂದ್ರ ಸರ್ಕಾರದ ಮುಂದೆ ಇಲ್ಲ ಎಂದು ಕಾರ್ಮಿಕ ಖಾತೆ
ರಾಜ್ಯ ಸಚಿವ ರಾಮೇಶ್ವರ ತೆಲಿ ಅವರು ರಾಜ್ಯಸಭೆಗೆ ತಿಳಿಸಿದ್ದಾರೆ.

ರಾಜ್ಯಸಭೆಯ ಸದಸ್ಯ ರಾಧಾ ಮೋಹನ ದಾಸ್ ಅಗರ್ವಾಲ್ ಅವರು ಕೇಳಿದ್ದ ‘ಕನಿಷ್ಠ ಪಿಂಚಣಿ ಮೊತ್ತ ₹1,000 ಇರುವುದನ್ನು ₹5,000ಕ್ಕೆ, ₹6,000ಕ್ಕೆ ಅಥವಾ ₹7,000ಕ್ಕೆ ಹೆಚ್ಚಿಸುವ ಪ್ರಸ್ತಾವ ಇದೆಯೇ’ ಎಂಬ ಪ್ರಶ್ನೆಗೆ ಸಚಿವರು ಈ ಉತ್ತರ ನೀಡಿದ್ದಾರೆ.

‍ಇಪಿಎಸ್ ಅಡಿಯಲ್ಲಿ 2022–23ನೆಯ ಹಣಕಾಸು ವರ್ಷದಲ್ಲಿ ಒಟ್ಟು 75 ಲಕ್ಷ ಜನರಿಗೆ ಪಿಂಚಣಿ ನೀಡಲಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT