ಮಂಗಳವಾರ, ಜುಲೈ 14, 2020
28 °C

ಇಂಧನಗಳ ಮೇಲಿನ ಅಬಕಾರಿ ಸುಂಕ ಹೆಚ್ಚಳ: ಕೇಂದ್ರದ ಬೊಕ್ಕಸಕ್ಕೆ ₹ 1.6 ಲಕ್ಷ ಕೋಟಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಇಂಧನಗಳ ಮೇಲಿನ ಅಬಕಾರಿ ಸುಂಕವನ್ನು ಗರಿಷ್ಠ ಪ್ರಮಾಣದಲ್ಲಿ ಏರಿಕೆ ಮಾಡಿ ರುವುದರಿಂದ ಪ್ರಸಕ್ತ ಹಣಕಾಸು ವರ್ಷ ದಲ್ಲಿ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ  ₹ 1.6 ಲಕ್ಷ ಕೋಟಿ ಮೊತ್ತದಷ್ಟು ಹೆಚ್ಚುವರಿ ಸಂಪನ್ಮೂಲ ಸಂಗ್ರಹವಾಗಲಿದೆ.

ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಎಕ್ಸೈಸ್‌ ಡ್ಯೂಟಿಯನ್ನು ಸರ್ಕಾರ ಕ್ರಮವಾಗಿ ಪ್ರತಿ ಲೀಟರ್‌ಗೆ ₹ 10 ಮತ್ತು ₹ 13ರಂತೆ ಹೆಚ್ಚಿಸಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯು ಎರಡು ದಶಕಗಳ ಹಿಂದಿನ ಮಟ್ಟಕ್ಕೆ ಕುಸಿದಿರುವುದರ ಪ್ರಯೋಜನ ಪಡೆಯಲು ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಮಾರ್ಚ್‌ ತಿಂಗಳಲ್ಲಿ ಪ್ರಕಟಿಸಿದ್ದ ಪೆಟ್ರೋಲ್‌, ಡೀಸೆಲ್‌ ಮೇಲಿನ ತಲಾ ₹ 3ಗಳ ಎಕ್ಸೈಸ್‌ ಡ್ಯೂಟಿ ಹೆಚ್ಚಳದಿಂದ ಸರ್ಕಾರಕ್ಕೆ ₹ 39,000 ಕೋಟಿ ಹೆಚ್ಚುವರಿ  ವರಮಾನ ಹರಿದು ಬರ ಲಿದೆ. ಈಗಿನ ನಿರ್ಧಾರವೂ ಸೇರಿದಂತೆ ಒಟ್ಟಾರೆ ಹೆಚ್ಚುವರಿ ವಾರ್ಷಿಕ ವರಮಾನ ₹ 2 ಲಕ್ಷ ಕೋಟಿಗಳಷ್ಟಾಗಲಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು