ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಧನಗಳ ಮೇಲಿನ ಅಬಕಾರಿ ಸುಂಕ ಹೆಚ್ಚಳ: ಕೇಂದ್ರದ ಬೊಕ್ಕಸಕ್ಕೆ ₹ 1.6 ಲಕ್ಷ ಕೋಟಿ

Last Updated 6 ಮೇ 2020, 21:04 IST
ಅಕ್ಷರ ಗಾತ್ರ

ನವದೆಹಲಿ: ಇಂಧನಗಳ ಮೇಲಿನ ಅಬಕಾರಿ ಸುಂಕವನ್ನು ಗರಿಷ್ಠ ಪ್ರಮಾಣದಲ್ಲಿ ಏರಿಕೆ ಮಾಡಿ ರುವುದರಿಂದ ಪ್ರಸಕ್ತ ಹಣಕಾಸು ವರ್ಷ ದಲ್ಲಿ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ ₹ 1.6 ಲಕ್ಷ ಕೋಟಿ ಮೊತ್ತದಷ್ಟು ಹೆಚ್ಚುವರಿ ಸಂಪನ್ಮೂಲ ಸಂಗ್ರಹವಾಗಲಿದೆ.

ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಎಕ್ಸೈಸ್‌ ಡ್ಯೂಟಿಯನ್ನು ಸರ್ಕಾರ ಕ್ರಮವಾಗಿ ಪ್ರತಿ ಲೀಟರ್‌ಗೆ ₹ 10 ಮತ್ತು ₹ 13ರಂತೆ ಹೆಚ್ಚಿಸಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯು ಎರಡು ದಶಕಗಳ ಹಿಂದಿನ ಮಟ್ಟಕ್ಕೆ ಕುಸಿದಿರುವುದರ ಪ್ರಯೋಜನ ಪಡೆಯಲು ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಮಾರ್ಚ್‌ ತಿಂಗಳಲ್ಲಿ ಪ್ರಕಟಿಸಿದ್ದ ಪೆಟ್ರೋಲ್‌, ಡೀಸೆಲ್‌ ಮೇಲಿನ ತಲಾ ₹ 3ಗಳ ಎಕ್ಸೈಸ್‌ ಡ್ಯೂಟಿ ಹೆಚ್ಚಳದಿಂದ ಸರ್ಕಾರಕ್ಕೆ ₹ 39,000 ಕೋಟಿ ಹೆಚ್ಚುವರಿ ವರಮಾನ ಹರಿದು ಬರ ಲಿದೆ. ಈಗಿನ ನಿರ್ಧಾರವೂ ಸೇರಿದಂತೆ ಒಟ್ಟಾರೆ ಹೆಚ್ಚುವರಿ ವಾರ್ಷಿಕ ವರಮಾನ ₹ 2 ಲಕ್ಷ ಕೋಟಿಗಳಷ್ಟಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT