ಗುರುವಾರ , ಮಾರ್ಚ್ 23, 2023
30 °C

ಜೂನ್‌ನಲ್ಲಿ ರಫ್ತು ಶೇ 47ರಷ್ಟು ಹೆಚ್ಚಳ: ಕೈಗಾರಿಕಾ ಸಚಿವಾಲಯ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ದೇಶದ ರಫ್ತು ವಹಿವಾಟು ಜೂನ್‌ನಲ್ಲಿ ಶೇ 47 ರಷ್ಟು ಹೆಚ್ಚಾಗಿದ್ದು, ₹ 2.40 ಲಕ್ಷ ಕೋಟಿಗೆ ತಲುಪಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಮಾಹಿತಿ ನೀಡಿದೆ.

ಕಳೆದ ವರ್ಷದ ಜೂನ್‌ನಲ್ಲಿ ₹ 1.62 ಲಕ್ಷ ಕೋಟಿ ಮೌಲ್ಯದ ರಫ್ತು ವಹಿವಾಟು ನಡೆದಿತ್ತು.

ಎಂಜಿನಿಯರಿಂಗ್‌, ಹರಳು ಮತ್ತು ಚಿನ್ನಾಭರಣ, ಪೆಟ್ರೋಲಿಯಂ ಉತ್ಪನ್ನಗಳ ವಲಯಗಳ ಉತ್ತಮ ಬೆಳವಣಿಗೆಯಿಂದ ಈ ಪ್ರಗತಿ ಸಾಧ್ಯವಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಆಮದು ವಹಿವಾಟು ಶೇ 96ರಷ್ಟು ಹೆಚ್ಚಾಗಿ ₹ 3.09 ಲಕ್ಷ ಕೋಟಿಗಳಷ್ಟಾಗಿದೆ. ಕಳೆದ ವರ್ಷದ ಜೂನ್‌ನಲ್ಲಿ ₹ 1.57 ಲಕ್ಷ ಕೋಟಿಗಳಷ್ಟಿತ್ತು.

ಆಮದು ರಫ್ತು ವಹಿವಾಟು ಹೆಚ್ಚಾಗಿರುವುದರಿಂದ ವ್ಯಾಪಾರ ಕೊರತೆ ಅಂತರವು ₹ 69,560 ಕೋಟಿಗಳಿಗೆ ತಲುಪಿದೆ.

ಏಪ್ರಿಲ್‌–ಜೂನ್‌ ತ್ರೈಮಾಸಿಕದಲ್ಲಿ ರಫ್ತು ವಹಿವಾಟು ₹ 3.80 ಲಕ್ಷ ಕೋಟಿಗಳಿಂದ ₹ 7.05 ಲಕ್ಷ ಕೋಟಿಗಳಿಗೆ ಏರಿಕೆ ಕಂಡಿದೆ.

ಏಪ್ರಿಲ್‌–ಜೂನ್‌ ತ್ರೈಮಾಸಿಕದಲ್ಲಿನ ರಫ್ತು ವಹಿವಾಟು ಗರಿಷ್ಠ ಮಟ್ಟದ್ದಾಗಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ₹ 29.60 ಲಕ್ಷ ಕೋಟಿ ಮೌಲ್ಯದ ರಫ್ತು ವಹಿವಾಟಿನ ಗುರಿ ಸಾಧಿಸಲು ಸಚಿವಾಲಯವು ಎಲ್ಲರೊಂದಿಗೆ ಕೆಲಸ ಮಾಡಲಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯೂಷ್‌ ಗೋಯಲ್‌ ತಿಳಿಸಿದ್ದಾರೆ.

ಏಪ್ರಿಲ್‌–ಜೂನ್‌ ಅವಧಿಯಲ್ಲಿ ಆಮದು ವಹಿವಾಟು ₹ 4.48 ಲಕ್ಷ ಕೋಟಿಗಳಿಂದ ₹ 9.33 ಲಕ್ಷ ಕೋಟಿಗಳಿಗೆ ಏರಿಕೆ ಕಂಡಿದೆ.

ಇದನ್ನೂ ಓದಿ... ನಿರಾಶ್ರಿತರು, ಭಿಕ್ಷುಕರು ದುಡಿಯಬೇಕು; ಎಲ್ಲ ಪೂರೈಸಲು ಸಾಧ್ಯವಿಲ್ಲ: ಹೈಕೋರ್ಟ್‌

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು