ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವ್ಯಾಪಾರ ಕೊರತೆ ಅಂತರ ಎರಡು ಪಟ್ಟು ಹೆಚ್ಚಳ: ವಾಣಿಜ್ಯ ಸಚಿವಾಲಯ

Last Updated 3 ಸೆಪ್ಟೆಂಬರ್ 2022, 19:31 IST
ಅಕ್ಷರ ಗಾತ್ರ

ನವದೆಹಲಿ: ದೇಶದ ವ್ಯಾಪಾರ ಕೊರತೆ ಅಂತರವು 2021ರ ಆಗಸ್ಟ್‌ಗೆ ಹೋಲಿಸಿದರೆ 2022ರ ಆಗಸ್ಟ್‌ನಲ್ಲಿ ಎರಡು ಪಟ್ಟು ಹೆಚ್ಚಾಗಿದೆ.

ಕೇಂದ್ರ ವಾಣಿಜ್ಯ ಸಚಿವಾಲಯ ಶನಿವಾರ ಬಿಡುಗಡೆ ಮಾಡಿರುವ ಪ್ರಾಥಮಿಕ ಅಂಕಿ–ಅಂಶಗಳ ಪ್ರಕಾರ 2022ರ ಆಗಸ್ಟ್‌ನಲ್ಲಿ ₹2.28 ಲಕ್ಷ ಕೋಟಿ ಆಗಿದೆ. 2021ರ ಆಗಸ್ಟ್‌ನಲ್ಲಿ ವ್ಯಾಪಾರ ಕೊರತೆಯು ₹93,445 ಕೋಟಿ ಇತ್ತು.

ರಫ್ತು ವಹಿವಾಟು ಶೇ 1.15ರಷ್ಟು ಇಳಿಕೆ ಕಂಡು ₹2.63 ಲಕ್ಷ ಕೋಟಿಗೆ ತಲುಪಿದೆ. ಆದರೆ, ಆಮದು ವಹಿವಾಟು ಶೇ 37 ರಷ್ಟು ಏರಿಕೆಯಾಗಿ ₹4.92 ಲಕ್ಷ ಕೋಟಿಗೆ ಏರಿಕೆ ಆಗಿದೆ.

ಪ್ರಸಕ್ತ ಹಣಕಾಸು ವರ್ಷದಲ್ಲಿ ರಫ್ತು ₹35.91 ಲಕ್ಷ ಕೋಟಿಗೆ ತಲುಪಲಿದೆ ಎಂದು ವಾಣಿಜ್ಯ ಕಾರ್ಯದರ್ಶಿ ಬಿ.ವಿ.ಆರ್‌. ಸುಬ್ರಹ್ಮಣ್ಯಂ ತಿಳಿಸಿದ್ದಾರೆ.

2022–23ರ ಏಪ್ರಿಲ್‌–ಆಗಸ್ಟ್‌ ಅವಧಿಯಲ್ಲಿ ರಫ್ತು ವಹಿವಾಟು ಶೇ 17ರಷ್ಟು ಹೆಚ್ಚಾಗಿದೆ. ಆಮದು ಶೇ 46ರಷ್ಟು ಏರಿಕೆ ಕಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT