ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಫ್ತು ವಹಿವಾಟು ಶೇ 30ರಷ್ಟು ಹೆಚ್ಚಳ

Last Updated 13 ಮೇ 2022, 12:43 IST
ಅಕ್ಷರ ಗಾತ್ರ

ನವದೆಹಲಿ: ದೇಶದ ರಫ್ತು ವಹಿವಾಟು ಮೌಲ್ಯವು ಏಪ್ರಿಲ್‌ನಲ್ಲಿ ₹ 3.09 ಲಕ್ಷ ಕೋಟಿಗೆ ತಲುಪಿದೆ. 2021ರ ಏಪ್ರಿಲ್‌ನಲ್ಲಿ ₹ 1.54 ಲಕ್ಷ ಕೋಟಿ ಮೌಲ್ಯದ ರಫ್ತು ವಹಿವಾಟು ನಡೆದಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ಶೇಕಡ 30.7ರಷ್ಟು ಹೆಚ್ಚಾಗಿದೆ.

ಪೆಟ್ರೋಲಿಯಂ ಉತ್ಪನ್ನಗಳು, ಎಲೆಕ್ಟ್ರಾನಿಕ್ಸ್‌ ಸರಕುಗಳು ಮತ್ತು ರಾಸಾಯನಿಕ ವಲಯಗಳ ಉತ್ತಮ ಸಾಧನೆಯಿಂದ ಈ ಪ್ರಮಾಣದ ಬೆಳವಣಿಗೆ ಸಾಧ್ಯವಾಗಿದೆ ಎಂದು ಕೇಂದ್ರ ವಾಣಿಜ್ಯ ಸಚಿವಾಲಯ ತಿಳಿಸಿದೆ.

ವ್ಯಾಪಾರ ಕೊರತೆ ಅಂತರ ₹ 1.17 ಲಕ್ಷ ಕೋಟಿಯಿಂದ ₹ 1.54 ಲಕ್ಷ ಕೋಟಿಗೆ ಏರಿಕೆ ಆಗಿದೆ. ಆಮದು ವಹಿವಾಟು 2022 ಏಪ್ರಿಲ್‌ನಲ್ಲಿ ₹ 4.64 ಲಕ್ಷ ಕೋಟಿಗೆ ಏರಿಕೆ ಆಗಿದ್ದು, 2021ರ ಏಪ್ರಿಲ್‌ಗೆ ಹೋಲಿಸಿದರೆ ಶೇ 31ರಷ್ಟು ಹೆಚ್ಚಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT