ಭಾನುವಾರ, ಜೂನ್ 26, 2022
22 °C

ಭಾರತದಲ್ಲಿ 25 ವರ್ಷ ಪೂರೈಸಿದ ಫೇಬರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಫೇಬರ್ ಇಂಡಿಯಾ ಕಂಪನಿಯು ಭಾರತದಲ್ಲಿ ತನ್ನ 25ನೇ ವರ್ಷಾಚರಣೆಯ ಅಂಗವಾಗಿ ಟಿ.ವಿ. ಜಾಹೀರಾತು ಬಿಡುಗಡೆ ಮಾಡಿದೆ.

ಬದಲಾಗುತ್ತಿರುವ ಅಗತ್ಯಗಳಿಗೆ ಅನುಗುಣವಾಗಿ ಗ್ರಾಹಕರಿಗೆ ಸುರಕ್ಷಿತವಾದ ಅಡುಗೆ ಉಪಕರಣಗಳನ್ನು ನೀಡುವ ಕುರಿತು ಕಂಪನಿಯ ಬದ್ಧತೆಯನ್ನು ಈ ಜಾಹೀರಾತಿನಲ್ಲಿ ವಿವರಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಕಂಪನಿಯು ಕಳೆದ ಐದು ವರ್ಷಗಳಿಂದ ವರ್ಷದಿಂದ ವರ್ಷಕ್ಕೆ ಶೇಕಡ 25ರ ದರದಲ್ಲಿ ಬೆಳವಣಿಗೆ ಕಾಣುತ್ತಿದೆ.

‘ಗ್ರಾಹಕರ ಅಗತ್ಯಕ್ಕೆ ತಕ್ಕಂತೆ ಹೊಸ ಉತ್ಪನ್ನಗಳನ್ನು ನೀಡುವುದರತ್ತ ಗಮನ ಹರಿಸಿದ್ದೇವೆ. 25 ವರ್ಷಗಳಿಂದ ಗ್ರಾಹಕರಿಗಾಗಿ ಹಲವು ಹೊಸ ಉತ್ಪನ್ನಗಳನ್ನು ಪರಿಚಯಿಸಲಾಗಿದೆ’ ಎಂದು ಕಂಪನಿಯ ಮಾರುಕಟ್ಟೆ ವಿಭಾಗದ ಹಿರಿಯ ನಿರ್ದೇಶಕ ಹರ್ದೇಶ್‌ ಚೋಜರ್ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು