ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜಿಎಸ್‌ಟಿ ಫೇಸ್‌ಲೆಸ್‌ ಅಸೆಸ್‌ಮೆಂಟ್ ಸದ್ಯಕ್ಕಿಲ್ಲ: ಜಗಮಲ್‌ ಸಿಂಘ್

Published 22 ನವೆಂಬರ್ 2023, 13:58 IST
Last Updated 22 ನವೆಂಬರ್ 2023, 13:58 IST
ಅಕ್ಷರ ಗಾತ್ರ

ನವದೆಹಲಿ: ಜಿಎಸ್‌ಟಿಯಲ್ಲಿ ಅಮೌಖಿಕ ಮೌಲ್ಯಮಾಪನ (ಫೇಸ್‌ಲೆಸ್‌ ಅಸೆಸ್‌ಮೆಂಟ್) ವ್ಯವಸ್ಥೆಯನ್ನು ಪರಿಚಯಿಸಲು ಇನ್ನೂ ಕೆಲ ಸಮಯ ಬೇಕಾಗಲಿದೆ ಎಂದು ಜಿಎಸ್‌ಟಿಎನ್‌ನ ಉಪಾಧ್ಯಕ್ಷ ಜಗಮಲ್‌ ಸಿಂಘ್‌ ಹೇಳಿದ್ದಾರೆ.

ಭಾರತೀಯ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಘ (ಫಿಕ್ಕಿ) ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಿಎಸ್‌ಟಿ ಮೌಲ್ಯಮಾಪನವು ನಿರ್ದಿಷ್ಟ ವ್ಯಾಪ್ತಿಯ ಅಧಿಕಾರಿ ಅಥವಾ ಘಟಕಕ್ಕೆ ಸಂಪರ್ಕ ಹೊಂದಿರುತ್ತದೆ. ಅದನ್ನು ಬದಲಾಯಿಸಲು ಸಮಯ ಹಿಡಿಯಲಿದೆ. ಅಮೌಖಿಕ ಮೌಲ್ಯಮಾಪನವನ್ನು ಪರಿಣಾಮಕಾರಿ ಆಗಿಸಲು ನೀತಿಯಲ್ಲಿ ಕೆಲವು ಬದಲಾವಣೆಗಳನ್ನು ತರುವುದೂ ಅಗತ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ವ್ಯವಸ್ಥೆಯನ್ನು ಮೊದಲಿಗೆ ಆದಾಯ ತೆರಿಗೆ ಇಲಾಖೆಯಲ್ಲಿ ಜಾರಿಗೊಳಿಸಲಾಯಿತು. ನಂತರ ಕಸ್ಟಮ್ಸ್‌ಗೂ ವಿಸ್ತರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT