ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಪ್ರಿಲ್‌ 1ರಂದು ₹2 ಸಾವಿರ ನೋಟು ವಿನಿಮಯವಿಲ್ಲ: ಆರ್‌ಬಿಐ

Published 28 ಮಾರ್ಚ್ 2024, 16:01 IST
Last Updated 28 ಮಾರ್ಚ್ 2024, 16:01 IST
ಅಕ್ಷರ ಗಾತ್ರ

ಮುಂಬೈ: ಏಪ್ರಿಲ್‌ 1ರಂದು ಬ್ಯಾಂಕ್‌ಗಳು ವಾರ್ಷಿಕ ಲೆಕ್ಕಗಳನ್ನು ಪೂರ್ಣಗೊಳಿಸುತ್ತವೆ. ಹಾಗಾಗಿ, ಅಂದು ಬ್ಯಾಂಕ್‌ಗಳಿಗೆ ರಜೆ ಇರುತ್ತದೆ. ಹಾಗಾಗಿ, ಅಂದು ಮಾತ್ರ ₹2,000 ಮುಖಬೆಲೆಯ ನೋಟುಗಳ ವಿನಿಮಯ ಇರುವುದಿಲ್ಲ. ಏಪ್ರಿಲ್‌ 2ರಿಂದ ಎಂದಿನಂತೆ ವಿನಿಮಯ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ ಗುರುವಾರ ತಿಳಿಸಿದೆ.

ಫೆಬ್ರುವರಿ 29ರ ಅಂತ್ಯಕ್ಕೆ ₹2 ಸಾವಿರ ಮುಖಬೆಲೆಯ ಶೇ 97.62ರಷ್ಟು ನೋಟುಗಳು ಬ್ಯಾಂಕ್‌ಗಳಿಗೆ ಮರಳಿದ್ದರೆ, ₹8,470 ಕೋಟಿ ಮೌಲ್ಯದ ನೋಟುಗಳು ಇನ್ನೂ ಜನರ ಬಳಿ ಇವೆ ಎಂದು ತಿಳಿಸಿದೆ.

ಬ್ಯಾಂಕ್‌ಗಳಲ್ಲಿ ಠೇವಣಿ ಇಡಲು ಹಾಗೂ ಬೇರೆ ಮುಖಬೆಲೆಯ ನೋಟುಗಳೊಂದಿಗೆ ಬದಲಾಯಿಸಿಕೊಳ್ಳುವುದಕ್ಕೆ 19 ಪ್ರಾದೇಶಿಕ ಕಚೇರಿಗಳಲ್ಲಿ ಅವಕಾಶ ಕಲ್ಪಿಸಲಾಗಿದೆ. ಅಂಚೆ ಮೂಲಕವೂ ಈ ಕಚೇರಿಗಳಿಗೆ ನೋಟುಗಳನ್ನು ಕಳುಹಿಸಿ ಬದಲಾಯಿಸಿಕೊಳ್ಳಲು ಅವಕಾಶವಿದೆ ಎಂದು ಆರ್‌ಬಿಐ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT