ಮಂಗಳವಾರ, ಜುಲೈ 14, 2020
28 °C

ನೀತಾ ಅಂಬಾನಿ ನಕಲಿ ಟ್ವೀಟ್‌: ಸ್ಪಷ್ಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ರಿಲಯನ್ಸ್‌ ಜಿಯೊ ಮಾಲೀಕ ಮುಕೇಶ್‌ ಅಂಬಾನಿ ಅವರ ಪತ್ನಿ ನೀತಾ ಅಂಬಾನಿ ಅವರ ಹೆಸರಿನಲ್ಲಿ ಸಾಮಾಜಿಕ ಜಾಲ ತಾಣದಲ್ಲಿ ನಕಲಿ ಟ್ವೀಟ್‌ ಹರಿದಾಡುತ್ತಿದೆ ಎಂದು ಕಂಪನಿಯು ಸ್ಪಷ್ಟಪಡಿಸಿದೆ.

ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿಗೆ (ಎನ್‌ಆರ್‌ಸಿ) ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್‌ ಶಾ ಅವರನ್ನು ಬೆಂಬಲಿಸಿ ನೀತಾ ಟ್ವೀಟ್‌ ಮಾಡಿದ್ದಾರೆ ಎನ್ನುವ ಸುದ್ದಿ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವುದರಲ್ಲಿ ಯಾವುದೇ ಹುರುಳಿಲ್ಲ. ರಿಲಯನ್ಸ್‌ ಫೌಂಡೇಷನ್‌ ಅಧ್ಯಕ್ಷೆ ನೀತಾ ಅವರು ಯಾವುದೇ ಟ್ವೀಟರ್‌ ಖಾತೆ ಹೊಂದಿಲ್ಲ. ಅವರ ಹೆಸರು ಮತ್ತು ಭಾವಚಿತ್ರ ಹೊಂದಿರುವ ಟ್ವೀಟರ್‌ ಖಾತೆಗಳು ನಕಲಿಯಾಗಿವೆ. ದುರುದ್ದೇಶಪೂರಿತವಾದ ಈ ಟ್ವೀಟ್‌ಗಳನ್ನು ಸಾರ್ವಜನಿಕರು ನಿರ್ಲಕ್ಷಿಸಬೇಕು ಎಂದು ರಿಲಯನ್ಸ್‌ ಜಿಯೊ ಇನ್ಫೊಕಾಂನ ವಕ್ತಾರರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು