ಗುರುವಾರ , ಫೆಬ್ರವರಿ 27, 2020
19 °C

ದರ ಕುಸಿತಕ್ಕೆ ಬೆಳಗಾವಿ, ಬಾಗಲಕೋಟೆ ರೈತರ ಆಕ್ರೋಶ: ಈರುಳ್ಳಿ ಸುರಿದು ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಬಾಗಲಕೋಟೆ/ಬೆಳಗಾವಿ: ಈರುಳ್ಳಿ ದರದಲ್ಲಿ ಭಾರಿ ಕುಸಿತ ಆಗಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿ, ಬೆಳಗಾವಿ ಹಾಗೂ ಬಾಗಲಕೋಟೆಯ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ರೈತರು ಶನಿವಾರ ದಿಢೀರ್‌ ಪ್ರತಿಭಟನೆ ನಡೆಸಿದರು.

ಬಾಗಲಕೋಟೆಯ ಎಪಿಎಂಸಿಯಲ್ಲಿ ಪ್ರತಿ ಕ್ವಿಂಟಲ್‌ಗೆ ₹200 ಬೆಲೆ ನಿಗದಿ ಮಾಡಿದ್ದರಿಂದ ಸಿಟ್ಟಿಗೆದ್ದ ಬೆಳೆಗಾರರು, ಎಪಿಎಂಸಿ ವೃತ್ತದಲ್ಲಿ ಈರುಳ್ಳಿ ಸುರಿದು ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟಿಸಿದರು. ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

‘ಸಾವಿರಾರು ರೂಪಾಯಿ ಖರ್ಚು ಮಾಡಿ ಈರುಳ್ಳಿ ಬೆಳೆಯಲಾಗಿದೆ. ಆದರೆ, ಕಡಿಮೆ ದರ ನಿಗದಿ ಮಾಡಲಾಗುತ್ತಿದೆ. ಇದರಿಂದ ರೈತರಿಗೆ ನಷ್ಟವಾಗುತ್ತಿದೆ. ಅಧಿಕಾರಿಗಳಿಗೆ ಹಾಗೂ ಸರ್ಕಾರಕ್ಕೆ ಅನ್ನದಾತರ ಕಷ್ಟ ಅರ್ಥವಾಗುತ್ತಿಲ್ಲ. ರೈತರಿಗೆ ಆಗುವ ಮೋಸದ ಬಗ್ಗೆ ಯಾರಿಗೂ ಗಮನವಿಲ್ಲದಂತಾಗಿದೆ. ಹೀಗಾದರೆ, ರೈತ ಬದಕುವುದು ಹೇಗೆ’ ಎಂದು ಪ್ರಶ್ನಿಸಿದರು. ‘ಕೆಲ ದಿನಗಳ ಹಿಂದೆ ಈರುಳ್ಳಿ ಬೆಲೆ ಪ್ರತಿ ಕ್ವಿಂಟಲ್‌ಗೆ ₹1,500 ಇತ್ತು. ಶನಿವಾರ ₹50 ರಿಂದ ₹500 ಆಗಿದೆ. ರೈತರ ಕುಟುಂಬಗಳು ಬೀದಿಗೆ ಬೀಳುವ ಪರಿಸ್ಥಿತಿ ಬರುತ್ತದೆ’ ಎಂದು ಬೆಳಗಾವಿಯಲ್ಲಿ ರೈತ ಎಂ.ಎಂ. ಲಮಾಣಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು