ನವದೆಹಲಿ: ಉಗ್ರರಿಗೆ ಹಣಕಾಸಿನ ನೆರವು ಹಾಗೂ ಹಣ ಅಕ್ರಮ ವರ್ಗಾವಣೆಗೆ ಕಡಿವಾಣ ಹಾಕುವಲ್ಲಿ ಅಮೆರಿಕ, ಜಪಾನ್, ಚೀನಾ ಮತ್ತು ಜರ್ಮನಿ ದಿಟ್ಟ ಕ್ರಮಕೈಗೊಂಡಿವೆ. ಭಾರತ ಕೂಡ ಇದಕ್ಕೆ ಸಂಬಂಧಿಸಿದಂತೆ ಸ್ಪಷ್ಟ ನೀತಿ ರೂಪಿಸಿದ್ದು, ಈ ರಾಷ್ಟ್ರಗಳ ಪಟ್ಟಿಗೆ ಸೇರ್ಪಡೆಯಾಗಲಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯದ ಮೂಲಗಳು ತಿಳಿಸಿವೆ.