ನವದೆಹಲಿ: ಭಾರತೀಯ ಆಹಾರ ನಿಗಮವು (ಎಫ್ಸಿಐ) ಫೆಬ್ರುವರಿ 22ರಂದು 11.72 ಲಕ್ಷ ಟನ್ ಗೋಧಿಯನ್ನು ಇ–ಹರಾಜು ಮೂಲಕ ಮಾರಾಟ ಮಾಡಲಿದೆ ಎಂದು ಕೇಂದ್ರ ಆಹಾರ ಸಚಿವಾಲಯವು ಶನಿವಾರ ತಿಳಿಸಿದೆ.

ದೇಶದಲ್ಲಿ ಗೋಧಿ ಬೆಲೆ ಏರಿಕೆ ನಿಯಂತ್ರಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯ ಅಡಿಯಲ್ಲಿ 30 ಲಕ್ಷ ಟನ್ ಗೋಧಿಯನ್ನು ಮಾರಾಟ ಮಾಡಲು ನಿರ್ಧರಿಸಿದೆ. ಇದರ ಭಾಗವಾಗಿ ನಿಗಮವು ಮಾರ್ಚ್ ಅಂತ್ಯದವರೆಗೆ ಒಟ್ಟು 25 ಲಕ್ಷ ಟನ್ ಗೋಧಿಯನ್ನು ಮಾರಾಟ ಮಾಡುವ ಯೋಜನೆ ರೂಪಿಸಿದೆ.

ಆಹಾರ ನಿಗಮವು ಈಗಾಗಲೇ ನಡೆಸಿರುವ ಎರಡು ಸುತ್ತಿನ ಹರಾಜಿನಲ್ಲಿ 12.98 ಲಕ್ಷ ಟನ್ ಗೋಧಿ ಮಾರಾಟ ಆಗಿದೆ. ಇದರಿಂದಾಗಿ ಗೋಧಿ ಮತ್ತು ಗೋಧಿ ಹಿಟ್ಟಿನ ರಿಟೇಲ್ ಮಾರಾಟ ದರ ಇಳಿಕೆ ಕಾಣುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.