ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಪ್ರಕರಣಗಳ ಇಳಿಕೆ: ಹಂತ ಹಂತವಾಗಿ ಅನ್‌ಲಾಕ್‌ಗೆ ಫಿಕ್ಕಿ ಆಗ್ರಹ

Last Updated 2 ಜೂನ್ 2021, 14:26 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಹೊಸ ಕೊರೊನಾ ಪ್ರಕರಣಗಳು ಕಡಿಮೆ ಆಗುತ್ತಿರುವ ಕಾರಣ, ಆರ್ಥಿಕ ಚಟುವಟಿಕೆಗಳ ಆರಂಭಕ್ಕೆ ಹಂತ ಹಂತವಾಗಿ ಅವಕಾಶ ಕಲ್ಪಿಸಬೇಕು ಎಂದು ಭಾರತೀಯ ವಾಣಿಜ್ಯೋದ್ಯಮ ಮಹಾಸಂಘ (ಫಿಕ್ಕಿ) ಕೇಂದ್ರ ಸರ್ಕಾರವನ್ನು ಆಗ್ರಹಿಸಿದೆ.

ಯಾವುದಾದರೂ ಕೈಗಾರಿಕೆಯು ತನ್ನ ಕಾರ್ಮಿಕರನ್ನು ಇತರರ ಸಂಪರ್ಕಕ್ಕೆ ಬರದಂತೆ ನೋಡಿಕೊಳ್ಳುವ ಸಾಮರ್ಥ್ಯ ಹೊಂದಿದ್ದರೆ, ಆ ಕೈಗಾರಿಕೆಯು ಅಗತ್ಯ ಸೇವೆಗಳ ವಿಭಾಗದಲ್ಲಿ ಇರದಿದ್ದರೂ ಅದಕ್ಕೆ ಕಾರ್ಯ ನಿರ್ವಹಿಸಲು ಅವಕಾಶ ಕೊಡಬೇಕು ಎಂದು ಫಿಕ್ಕಿ ಹೇಳಿದೆ.

ನಿರ್ಬಂಧಗಳನ್ನು ಜಾರಿಗೆ ತರಲು ಬಹಳ ಕಾಲ ಕಾಯುವುದರ ಪರಿಣಾಮವಾಗಿ, ಕೋವಿಡ್‌ ಪ್ರಕರಣಗಳು ಭಾರಿ ಪ್ರಮಾಣದಲ್ಲಿ ಹೆಚ್ಚಳ ಕಾಣಬಹುದು. ಅದು ವೈದ್ಯಕೀಯ ಮೂಲಸೌಕರ್ಯದ ಮೇಲೆ ತೀವ್ರ ಒತ್ತಡ ಸೃಷ್ಟಿಸಬಹುದು ಎಂಬುದನ್ನು ಎರಡನೆಯ ಅಲೆಯ ಉಗ್ರ ಅವತಾರವು ತೋರಿಸಿಕೊಟ್ಟಿದೆ ಎಂದು ಒಕ್ಕೂಟವು ಹೇಳಿದೆ.

‘ಜೀವ ಮತ್ತು ಜೀವನೋಪಾಯದ ನಡುವೆ ಸಮತೋಲನ ಕಾಯ್ದುಕೊಂಡು, ಆರ್ಥಿಕ ಚಟುವಟಿಕೆಗಳನ್ನು ಹಂತ ಹಂತವಾಗಿ ಆರಂಭಿಸುವ ಸಲಹೆಯನ್ನು ನಾವು ಮುಂದಿಡುತ್ತಿದ್ದೇವೆ’ ಎಂದು ಅದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯೂಷ್ ಗೋಯಲ್ ಅವರಿಗೆ ಬರೆದಿರುವ ಪತ್ರದಲ್ಲಿ ಹೇಳಿದೆ. ಕನಿಷ್ಠ ಶೇಕಡ 60ರಷ್ಟು ಕಾರ್ಮಿಕರಿಗೆ ಒಂದು ಡೋಸ್‌ ಲಸಿಕೆ ಹಾಕಿಸಿರುವ ಉದ್ದಿಮೆಗಳನ್ನು ನಿರ್ಬಂಧಗಳಿಂದ ಮುಕ್ತಗೊಳಿಸಬೇಕು ಎಂದು ಆಗ್ರಹಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT