ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಡಿಪಿ:ಎರಡಂಕಿ ಬೆಳವಣಿಗೆ ನಿರ್ಮಲಾ ಸೀತಾರಾಮನ್‌ ವಿಶ್ವಾಸ

Last Updated 3 ಸೆಪ್ಟೆಂಬರ್ 2022, 19:31 IST
ಅಕ್ಷರ ಗಾತ್ರ

ಹೈದರಾಬಾದ್‌: ಪ್ರಸಕ್ತ ಹಣಕಾಸು ವರ್ಷದಲ್ಲಿ ದೇಶದ ಒಟ್ಟು ಆಂತರಿಕ ಉತ್ಪಾದನೆಯು (ಜಿಡಿಪಿ) ಎರಡಂಕಿ ಬೆಳವಣಿಗೆ ಕಾಣಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೇರೆ ದೇಶಗಳಿಗೆ ಹೋಲಿಸಿದರೆ ಭಾರತದ ಸ್ಥಿತಿ ಉತ್ತಮವಾಗಿದೆ. ಅಗತ್ಯ ಇರುವ ವಲಯಗಳಿಗೆ ಸರ್ಕಾರ ನೆರವಾಗಲಿದೆ. ಆ ಮೂಲಕ ಆರ್ಥಿಕ ಬೆಳವಣಿಗೆಗೆ ಉತ್ತೇಜನ ನೀಡಲಾಗುವುದು ಎಂದು ಹೇಳಿದ್ದಾರೆ.

ಆರ್ಥಿಕ ಹಿಂಜರಿತದ ಯಾವುದೇ ಸಾಧ್ಯತೆಯೂ ಇಲ್ಲ ಎಂದೂ ತಿಳಿಸಿದ್ದಾರೆ. ಮೊದಲ ತ್ರೈಮಾಸಿಕದಲ್ಲಿ ಜಿಡಿಪಿ ಶೇ 1.35ರಷ್ಟು ಬೆಳವಣಿಗೆ ಕಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT