ಭಾನುವಾರ, ಮೇ 22, 2022
22 °C

ಫಿನೊ ಫೇಮೆಂಟ್ಸ್‌ ಬ್ಯಾಂಕ್‌ ಲಾಭ ಶೇ 74ರಷ್ಟು ಹೆಚ್ಚಳ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಫಿನೊ ಪೇಮೆಂಟ್ಸ್‌ ಬ್ಯಾಂಕ್‌, ಪ್ರಸಕ್ತ ಹಣಕಾಸು ವರ್ಷದ ಸೆಪ್ಟೆಂಬರ್‌ ತ್ರೈಮಾಸಿಕದಲ್ಲಿ ₹ 7.89 ಕೋಟಿ ನಿವ್ವಳ ಲಾಭ ಗಳಿಸಿದೆ. ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ₹ 4.52 ಕೋಟಿ ನಿವ್ವಳ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ಲಾಭವು ಶೇ 74ರಷ್ಟು ಹೆಚ್ಚಾಗಿದೆ.

ಬ್ಯಾಂಕ್‌ನ ವರಮಾನವು ₹ 242 ಕೋಟಿಗಳಷ್ಟಾಗಿದ್ದು, ಹಿಂದಿನ ಹಣಕಾಸು ವರ್ಷದ ಇದೇ ಅವಧಿಗೆ ಹೋಲಿಸಿದರೆ ಲಾಭದಲ್ಲಿ ಶೇ 35ರಷ್ಟು ಏರಿಕೆ ಕಂಡುಬಂದಿದೆ ಎಂದು ಷೇರುಪೇಟೆಗೆ ಮಾಹಿತಿ ನೀಡಿದೆ.

ಫಿನೊ ಬ್ಯಾಂಕ್‌ ಈಚೇಗಷ್ಟೇ ಐಪಿಒಗೆ ಬಂದಿದ್ದು, ಶುಕ್ರವಾರ ಎನ್‌ಎಸ್‌ಇ ಮತ್ತು ಬಿಎಸ್‌ಇನಲ್ಲಿ ನೋಂದಣಿ ಆಗಿದೆ. ದೇಶದ ಷೇರುಪೇಟೆಗಳಲ್ಲಿ ನೋಂದಾಯಿತ ಮೊದಲ ಪೇಮೆಂಟ್ಸ್‌ ಬ್ಯಾಂಕ್‌ ಇದಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು