ನವದೆಹಲಿ: ಪ್ರಸಕ್ತ ಆರ್ಥಿಕ ವರ್ಷದ ಏಪ್ರಿಲ್–ಸೆಪ್ಟೆಂಬರ್ ಅವಧಿಯಲ್ಲಿ ಕೇಂದ್ರ ಸರ್ಕಾರದ ವರಮಾನ ಮತ್ತು ವೆಚ್ಚದ ನಡುವಿನ ಅಂತರವಾದ ವಿತ್ತೀಯ ಕೊರತೆಯು ಇಡೀ ವರ್ಷದ ಗುರಿಯ ಶೇ 36.5ರಷ್ಟಾಗಿದೆ.

ಹಣಕಾಸಿನ ಮೌಲ್ಯದ ಲೆಕ್ಕದಲ್ಲಿ ಇದು ₹5.73 ಲಕ್ಷ ಕೋಟಿಯಾಗಿದೆ ಎಂದು ಲೆಕ್ಕಪತ್ರಗಳ ಮಹಾನಿಯಂತ್ರಕರ (ಸಿಜಿಎ) ವರದಿ ಶುಕ್ರವಾರ ತಿಳಿಸಿದೆ.

ಕಳೆದ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ವಿತ್ತೀಯ ಕೊರತೆಯು ₹4.7 ಲಕ್ಷ ಕೋಟಿಯಷ್ಟು (ಶೇ 29) ಇತ್ತು. 2025–26ರಲ್ಲಿ ವಿತ್ತೀಯ ಕೊರತೆಯನ್ನು ಜಿಡಿಪಿಯ ಶೇ 4.4ಕ್ಕೆ (ಹಣಕಾಸಿನ ಮೌಲ್ಯದ ಲೆಕ್ಕದಲ್ಲಿ ₹15.69 ಲಕ್ಷ ಕೋಟಿ) ತಗ್ಗಿಸಲು ಸರ್ಕಾರ ಬಜೆಟ್ನಲ್ಲಿ ಗುರಿ ನಿಗದಿಪಡಿಸಲಾಗಿದೆ.

ಏಪ್ರಿಲ್ನಿಂದ ಸೆಪ್ಟೆಂಬರ್ವರೆಗೆ ಸರ್ಕಾರವು ₹17.3 ಲಕ್ಷ ಕೋಟಿ (ಶೇ 49.5) ವರಮಾನ ಸ್ವೀಕರಿಸಿದೆ. ಒಟ್ಟು ವೆಚ್ಚವು ₹23 ಲಕ್ಷ ಕೋಟಿ ಆಗಿದೆ. ಇದು ಬಜೆಟ್ ಅಂದಾಜಿನ ಶೇ 45ರಷ್ಟಾಗಿದೆ.

ಕೇಂದ್ರ ಸರ್ಕಾರ ಸ್ವೀಕರಿಸಿದ ಒಟ್ಟು ಮೊತ್ತದ ಪೈಕಿ ₹12.29 ಲಕ್ಷ ಕೋಟಿ ತೆರಿಗೆ ವರಮಾನದಿಂದ ಸಂಗ್ರಹಿಸಿದೆ. ₹4.66 ಲಕ್ಷ ಕೋಟಿ ತೆರಿಗೆಯೇತರ ವರಮಾನ ಮತ್ತು ಇತರೆ ಮೂಲಗಳಿಂದ ₹34,770 ಕೋಟಿ ಸಂಗ್ರಹಿಸಿದೆ.

ಕೇಂದ್ರ ಸರ್ಕಾರವು, ರಾಜ್ಯ ಸರ್ಕಾರಗಳಿಗೆ ₹6.31 ಲಕ್ಷ ಕೋಟಿಯನ್ನು ತೆರಿಗೆ ಪಾಲಾಗಿ ವರ್ಗಾಯಿಸಿದೆ. ಇದು ಕಳೆದ ಆರ್ಥಿಕ ವರ್ಷದ ಇದೇ ಅವಧಿಗೆ ಹೋಲಿಸಿದರೆ ₹86,948 ಕೋಟಿಯಷ್ಟು ಅಧಿಕವಾಗಿದೆ ಎಂದು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.