ಶುಕ್ರವಾರ, ಜನವರಿ 15, 2021
21 °C

ವಿತ್ತೀಯ ಕೊರತೆ ಶೇ 7.5ರಷ್ಟಾಗಲಿದೆ: ತಜ್ಞರ ಅಂದಾಜು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೋವಿಡ್‌–19 ಸಾಂಕ್ರಾಮಿಕದಿಂದಾಗಿ ವರಮಾನ ಸಂಗ್ರಹ ಕಡಿಮೆ ಆಗಲಿದೆ. ಇದರಿಂದಾಗಿ ಪ್ರಸಕ್ತ ಹಣಕಾಸು ವರ್ಷದಲ್ಲಿ ವಿತ್ತೀಯ ಕೊರತೆಯು ಜಿಡಿಪಿಯ ಶೇ 7.5ರಷ್ಟಾಗುವ ನಿರೀಕ್ಷೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಪ್ರಸಕ್ತ ಹಣಕಾಸು ವರ್ಷಕ್ಕೆ ಜಿಡಿಪಿಯ ಶೇ 3.5ರಷ್ಟಕ್ಕೆ ನಿಯಂತ್ರಿಸಲು ಬಜೆಟ್‌ನಲ್ಲಿ ಅಂದಾಜು ಮಾಡಲಾಗಿತ್ತು. ಇದಕ್ಕೆ ಹೋಲಿಸಿದರೆ ಶೇ 100ರಷ್ಟು ಏರಿಕೆ ಆಗಲಿದೆ ಎಂದು ಹೇಳಿದ್ದಾರೆ.

ಮೌಲ್ಯದ ಲೆಕ್ಕದಲ್ಲಿ ವಿತ್ತೀಯ ಕೊರತೆಯು ಜಿಡಿಪಿಯ ₹ 7.96 ಲಕ್ಷ ಕೋಟಿಗಳಷ್ಟು (ಶೇ 3.5) ಆಗಲಿದೆ ಎಂದು 2020–21ರ ಬಜೆಟ್‌ನಲ್ಲಿ ಅಂದಾಜು ಮಾಡಲಾಗಿದೆ. ಪ್ರಸಕ್ತ ಹಣಕಾಸು ವರ್ಷಕ್ಕೆ ಮಾರುಕಟ್ಟೆಯಿಂದ ಸಾಲ ಪಡೆಯುವ ಮೊತ್ತವನ್ನು ₹ 7.80 ಲಕ್ಷ ಕೋಟಿಗೆ ನಿಗದಿ ಮಾಡಲಾಗಿತ್ತು. ಆದರೆ, ಕೋವಿಡ್‌ ವಿರುದ್ಧದ ಹೋರಾಟಕ್ಕಾಗಿ ಅದನ್ನು ₹ 12 ಲಕ್ಷ ಕೋಟಿಗಳಿಗೆ ಹೆಚ್ಚಿಸಲಾಗಿದೆ.

ಇಕ್ರಾದ ಮುಖ್ಯ ಆರ್ಥಿಕ ತಜ್ಞೆ ಅದಿತಿ ನಾಯರ್‌ ಪ್ರಕಾರ, ವಿತ್ತೀಯ ಕೊರತೆಯು ಜಿಡಿಪಿಯ ಶೇ 7.5ರಷ್ಟು ಆಗಲಿದೆ. ಮೌಲ್ಯದ ಲೆಕ್ಕದಲ್ಲಿ ₹ 14.5 ಲಕ್ಷ ಕೋಟಿಗಳಷ್ಟು ಆಗಲಿದೆ.

‘ಕೇಂದ್ರ ಸರ್ಕಾರವು ಈಗಾಗಲೇ ಘೋಷಿಸಿರುವ ₹ 12 ಲಕ್ಷ ಕೋಟಿಗೂ ಹೆಚ್ಚಿನ ವಿತ್ತೀಯ ಕೊರತೆಯನ್ನು ಎದುರಿಸಲಿದೆ’ ಎಂದು ಇವೈ ಇಂಡಿಯಾದ ಮುಖ್ಯ ನೀತಿ ಸಲಹೆಗಾರ ಡಿ.ಕೆ. ಶ್ರೀವಾಸ್ತವ ಹೇಳಿದ್ದಾರೆ.

ಏಪ್ರಿಲ್‌–ನವೆಂಬರ್‌ ಅವಧಿಯಲ್ಲಿ ವಿತ್ತೀಯ ಕೊರತೆಯು ಬಜೆಟ್‌ ಅಂದಾಜಿನ ಶೇ 135ರಷ್ಟಾಗಿದೆ. ಹಿಂದಿನ ಹಣಕಾಸು ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ 33ರಷ್ಟು ಹೆಚ್ಚಿಗೆ ಇದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು