ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿತ್ತೀಯ ಕೊರತೆ ಹೆಚ್ಚಳ

Last Updated 30 ಜೂನ್ 2020, 21:20 IST
ಅಕ್ಷರ ಗಾತ್ರ

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದ ಮೊದಲ ಎರಡು ತಿಂಗಳಿನಲ್ಲಿ ವಿತ್ತೀಯ ಕೊರತೆಯು ಬಜೆಟ್‌ ಅಂದಾಜಿನ ಶೇ 58.6ರಷ್ಟಾಗಿದೆ. ಮೌಲ್ಯದ ಲೆಕ್ಕದಲ್ಲಿ ₹ 4.66 ಲಕ್ಷ ಕೋಟಿಗೆ ತಲುಪಿದೆ ಎಂದು ಮಹಾಲೇಖಪಾಲರ (ಸಿಜಿಎ) ವರದಿಯಲ್ಲಿ ತಿಳಿಸಲಾಗಿದೆ.

ಲಾಕ್‌ಡೌನ್‌ನಿಂದಾಗಿ ತೆರಿಗೆ ಸಂಗ್ರಹದಲ್ಲಿ ಇಳಿಕೆಯಾಗಿದೆ. ಹೀಗಾಗಿ ವಿತ್ತೀಯ ಕೊರತೆ ಹೆಚ್ಚಾಗಿದೆ.

ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ವಿತ್ತೀಯ ಕೊರತೆಯು ಬಜೆಟ್‌ ಅಂದಾಜಿನ ಶೇ 52ರಷ್ಟಿತ್ತು.

2020–21ನೇ ಹಣಕಾಸು ವರ್ಷಕ್ಕೆ ವಿತ್ತೀಯ ಕೊರತೆಯನ್ನು ₹ 7.96 ಲಕ್ಷ ಕೋಟಿ ಅಥವಾ ಜಿಡಿಪಿಯ ಶೇ 3.5ರಲ್ಲಿ ನಿಯಂತ್ರಿಸುವ ಗುರಿಯನ್ನು ಕೇಂದ್ರ ಸರ್ಕಾರ ಇಟ್ಟುಕೊಂಡಿದೆ. ಆದರೆ, ಕೊರೊನಾ ಸೃಷ್ಟಿಸಿರುವ ಬಿಕ್ಕಟ್ಟಿನಿಂದಾಗಿ ಈ ಗುರಿಯನ್ನು ಮರುಪರಿಶೀಲನೆ ಮಾಡುವ ಸಾಧ್ಯತೆ ಇದೆ.

2019–20ರಲ್ಲಿ ಏಳುವರ್ಷಗಳ ಗರಿಷ್ಠ ಮಟ್ಟವಾದ ಶೇ 4.6ಕ್ಕೆ ಏರಿಕೆಯಾಗಿತ್ತು.

2020–21ಕ್ಕೆ ವಿತ್ತೀಯ ಕೊರತೆಯು ₹ 13 ಲಕ್ಷ ಕೋಟಿಗಳಷ್ಟಾಗಲಿದೆ (ಶೇ 6.7) ಎಂದು ಐಸಿಆರ್‌ಎ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT