ಗುರುವಾರ, 12 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹಿಗ್ಗಿದ ವಿತ್ತೀಯ ಕೊರತೆ ಅಂತರ: ಸಿಜಿಎ ವರದಿ

Published 30 ಆಗಸ್ಟ್ 2024, 15:54 IST
Last Updated 30 ಆಗಸ್ಟ್ 2024, 15:54 IST
ಅಕ್ಷರ ಗಾತ್ರ

ನವದೆಹಲಿ: 2024–25ರ ಹಣಕಾಸು ವರ್ಷದ ಏಪ್ರಿಲ್-ಜುಲೈ ಅವಧಿಯಲ್ಲಿ ಕೇಂದ್ರ ಸರ್ಕಾರದ ವಿತ್ತೀಯ ಕೊರತೆಯು ಇಡೀ ವರ್ಷದ ಗುರಿಯ ಶೇ 17.2ರಷ್ಟು ಆಗಿದೆ ಎಂದು ಎಂದು ಲೆಕ್ಕಪತ್ರಗಳ ಮಹಾನಿಯಂತ್ರಕರು (ಸಿಜಿಎ) ಶುಕ್ರವಾರ ಬಿಡುಗಡೆಗೊಳಿಸಿರುವ ವರದಿ ತಿಳಿಸಿದೆ.

ವರಮಾನ ಮತ್ತು ವೆಚ್ಚದ ನಡುವಣ ಅಂತರವಾದ ವಿತ್ತೀಯ ಕೊರತೆಯು ಏಪ್ರಿಲ್‌–ಜುಲೈ ಅವಧಿಯಲ್ಲಿ ಮೌಲ್ಯದ ಲೆಕ್ಕದಲ್ಲಿ ₹2.76 ಲಕ್ಷ ಕೋಟಿಯಷ್ಟಿದೆ. 2023–24ನೇ ಸಾಲಿನ ಬಜೆಟ್‌ ಅಂದಾಜಿನ ಶೇ 33.9ರಷ್ಟು ಆಗಿದೆ ಎಂದು ತಿಳಿಸಿದೆ.

2023–24ನೇ ಆರ್ಥಿಕ ವರ್ಷದಲ್ಲಿ ವಿತ್ತೀಯ ಕೊರತೆಯು ಶೇ 5.6ರಷ್ಟು ಇತ್ತು. ಇತ್ತೀಚೆಗೆ ಮಂಡನೆಯಾದ ಬಜೆಟ್‌ನಲ್ಲಿ 2024–25ನೇ ಆರ್ಥಿಕ ಸಾಲಿಗೆ ಜಿಡಿಪಿಯ ಶೇ 4.9ರಷ್ಟಕ್ಕೆ ತಗ್ಗಿಸುವ ಗುರಿ ನಿಗದಿಪಡಿಸಲಾಗಿದೆ. ಮೌಲ್ಯದ ಲೆಕ್ಕದಲ್ಲಿ ಇದು ₹16.13 ಲಕ್ಷ ಕೋಟಿ ಆಗಿದೆ.  

ಏಪ್ರಿಲ್‌ನಿಂದ ಜುಲೈವರೆಗೆ ₹7.15 ಲಕ್ಷ ಕೋಟಿ ನಿವ್ವಳ ತೆರಿಗೆ ವರಮಾನ ಸಂಗ್ರಹವಾಗಿದೆ. ಇದು ಪ್ರಸಕ್ತ ಆರ್ಥಿಕ ವರ್ಷದ ಬಜೆಟ್‌ ಅಂದಾಜಿನ ಶೇ 27ರಷ್ಟಿದೆ. 

ಜುಲೈ ಅಂತ್ಯಕ್ಕೆ ಕೇಂದ್ರ ಸರ್ಕಾರದ ಒಟ್ಟು ವೆಚ್ಚವು ₹13 ಲಕ್ಷ ಕೋಟಿ ಆಗಿದೆ. ಇದು ಬಜೆಟ್‌ ಅಂದಾಜಿನ ಶೇ 27ರಷ್ಟಿದೆ. ಕಳೆದ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ಸರ್ಕಾರದ ವೆಚ್ಚವು ಶೇ 30ರಷ್ಟನ್ನು ದಾಟಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT