ಬುಧವಾರ, ಜನವರಿ 19, 2022
26 °C

ಭಾರತದ ಜಿಡಿಪಿ ಬೆಳವಣಿಗೆ: ಎಷ್ಟಿದೆ ಫಿಚ್ ರೇಟಿಂಗ್ಸ್ ಅಂದಾಜು?

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತದ ಅರ್ಥ ವ್ಯವಸ್ಥೆಯು ಶೇಕಡ 8.4ರಷ್ಟು ಬೆಳವಣಿಗೆ ಕಾಣಲಿದೆ ಎಂದು ಫಿಚ್ ರೇಟಿಂಗ್ಸ್ ಅಂದಾಜು ಮಾಡಿದೆ. ಕೋವಿಡ್‌ನ ಎರಡನೆಯ ಅಲೆಯ ನಂತರದಲ್ಲಿ ಅರ್ಥ ವ್ಯವಸ್ಥೆ ಕಂಡಿರುವ ಬೆಳವಣಿಗೆಯು ನಿರೀಕ್ಷೆಗಿಂತಲೂ ಕಡಿಮೆ ಮಟ್ಟದಲ್ಲಿ ಇದೆ ಎಂದು ಅದು ಹೇಳಿದೆ.

ಭಾರತವು ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇಕಡ 8.7ರಷ್ಟು ಬೆಳವಣಿಗೆ ಸಾಧಿಸಲಿದೆ ಎಂದು ಫಿಚ್ ರೇಟಿಂಗ್ಸ್ ಈ ಹಿಂದೆ ಅಂದಾಜು ಮಾಡಿತ್ತು. ಮುಂದಿನ ಹಣಕಾಸು ವರ್ಷದಲ್ಲಿ (2022–23) ದೇಶದ ಜಿಡಿಪಿ ಬೆಳವಣಿಗೆ ದರವು ಶೇ 10.3ರ ಮಟ್ಟ ತಲುಪಲಿದೆ ಎಂದು ಅದು ಈಗ ಅಂದಾಜಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು