ಸೋಮವಾರ, ಮೇ 17, 2021
28 °C

ಸಾಧ್ಯವಿರುವ ಕಡೆ ಮನೆಯಿಂದ ಕೆಲಸ ಮಾಡಿಸಿ: ಸುಧಾಕರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಸಾಧ್ಯವಿರುವ ಕಡೆಗಳಲ್ಲೆಲ್ಲ ಮನೆಯಿಂದ ಕೆಲಸ ಮಾಡುವ ವ್ಯವಸ್ಥೆ ಮಾಡಿ. 45 ವರ್ಷಕ್ಕಿಂತ ಹೆಚ್ಚು ವಯಸ್ಸಾದವರು ಕೋವಿಡ್–19 ಲಸಿಕೆ ಪಡೆಯುವಂತೆ ನೋಡಿಕೊಳ್ಳಿ’ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಉದ್ಯಮ ವಲಯಕ್ಕೆ ಸಲಹೆ ನೀಡಿದರು.

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯು (ಎಫ್‌ಕೆಸಿಸಿಐ) ಕೋವಿಡ್‌–19 ಪರಿಸ್ಥಿತಿಯ ಕುರಿತು ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಗುರುವಾರ ಮಾತನಾಡಿದ ಅವರು, ‘ಆರ್ಥಿಕತೆ ಚೇತರಿಕೆ ಕಾಣುತ್ತಿರುವ ಸಂದರ್ಭದಲ್ಲಿ ಕೊರೊನಾ ಎರಡನೇ ಅಲೆ ಬಂದಿದೆ. ಇದನ್ನು ನಿಯಂತ್ರಿಸಲು ಸರ್ಕಾರ ಎಲ್ಲ ಪ್ರಯತ್ನಗಳನ್ನೂ ನಡೆಸುತ್ತಿದೆ. ಕೈಗಾರಿಕೆ, ಸೇವಾ ವಲಯ ಹಾಗೂ ವ್ಯಾಪಾರಸ್ಥರು ಸರ್ಕಾರದೊಂದಿಗೆ ಕೈಜೋಡಿಸಬೇಕು’ ಎಂದು ಮನವಿ ಮಾಡಿದರು.

ಮೈಸೂರಿನಲ್ಲಿ ರೆಮಿಡಿಸೀರ್ ಅನ್ನು ಕದ್ದುಸಾಗಿಸುವುದು ಮತ್ತು ಮಾರಾಟ ಮಾಡುವುದು ನಡೆಯುತ್ತಿದೆ ಎಂದು ಒಕ್ಕೂಟದ ಮಾಜಿ ಅಧ್ಯಕ್ಷ ಸುಧಾಕರ್ ಶೆಟ್ಟಿ ಅವರು ಸಚಿವರ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸುಧಾಕರ್, ‘ಲಸಿಕೆ ಕಳ್ಳಸಾಗಣೆ, ದುಪ್ಪಟ್ಟು ಬೆಲೆಗೆ ಮಾರಾಟ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಅಂತಹ ಪ್ರಕರಣಗಳು ಗಮನಕ್ಕೆ ಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.