ಸೋಮವಾರ, ಸೆಪ್ಟೆಂಬರ್ 27, 2021
21 °C

ಫ್ಲಿಪ್‌ಕಾರ್ಟ್‌: 23 ಸಾವಿರ ಉದ್ಯೋಗಿಗಳ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಇ–ಕಾಮರ್ಸ್‌ ವಲಯದ ವಹಿವಾಟು ಹೆಚ್ಚುತ್ತಿರುವುದರಿಂದ ಫ್ಲಿಪ್‌ಕಾರ್ಟ್‌ ಕಂಪನಿಯು ಮೂರು ತಿಂಗಳ ಅವಧಿಯಲ್ಲಿ 23 ಸಾವಿರ ಜನರಿಗೆ ಉದ್ಯೋಗ ನೀಡಿದೆ. ಈ ವರ್ಷದ ಮಾರ್ಚ್‌ನಿಂದ ಮೇ ತಿಂಗಳವರೆಗಿನ ಅವಧಿಯಲ್ಲಿ ದೇಶದಾದ್ಯಂತ ಡೆಲಿವರಿ ಕಾರ್ಯನಿರ್ವಾಹಕರು ಸೇರಿದಂತೆ ತನ್ನ ಪೂರೈಕೆ ವ್ಯವಸ್ಥೆಯ ವಿವಿಧ ಹಂತಗಳಲ್ಲಿ ಈ ನೇಮಕ ಮಾಡಿಕೊಂಡಿದೆ.

‘ಫ್ಲಿಪ್‌ಕಾರ್ಟ್‌ನಲ್ಲಿ ನೌಕರರ ಸುರಕ್ಷತೆಯ ಜೊತೆಗೆ, ಗ್ರಾಹಕರ ಅಗತ್ಯಗಳನ್ನು ಪೂರೈಸುವುದಕ್ಕೂ ಆದ್ಯತೆ ಇದೆ. ದೇಶದಾದ್ಯಂತ ಇ-ಕಾಮರ್ಸ್ ಸೇವೆಗಳಿಗೆ ಬೇಡಿಕೆ ಹೆಚ್ಚುತ್ತಿದ್ದು, ಈ ಸಂದರ್ಭದಲ್ಲಿ ನಮ್ಮ ಪೂರೈಕೆ ವ್ಯವಸ್ಥೆಯನ್ನು ವಿಸ್ತರಿಸುವುದರಿಂದ ಸಾವಿರಾರು ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತಿವೆ’ ಎಂದು ಫ್ಲಿಪ್‌ಕಾರ್ಟ್‌ನ ಪೂರೈಕೆ ವ್ಯವಸ್ಥೆ ವಿಭಾಗದ ಹಿರಿಯ ಉಪಾಧ್ಯಕ್ಷ ಹೇಮಂತ್‌ ಬಾದ್ರಿ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು