ಸೋಮವಾರ, ಜೂನ್ 27, 2022
24 °C

ಫ್ಲಿಪ್‌ಕಾರ್ಟ್‌ನಿಂದ ಕ್ಯೂಆರ್‌ ಕೋಡ್ ಆಧಾರಿತ ಪಾವತಿ ಸೌಲಭ್ಯ

ಪಿಟಿಐ Updated:

ಅಕ್ಷರ ಗಾತ್ರ : | |

ಫ್ಲಿಪ್‌ಕಾರ್ಟ್‌–ಸಾಂದರ್ಭಿಕ ಚಿತ್ರ

ನವದೆಹಲಿ: ಫ್ಲಿಪ್‌ಕಾರ್ಟ್‌ ಕಂಪನಿಯು ಕ್ಯೂಆರ್‌ ಕೋಡ್‌ ಆಧಾರಿತ ಪಾವತಿ ಸೌಲಭ್ಯವನ್ನು ಜಾರಿಗೆ ತಂದಿದೆ. ಉತ್ಪನ್ನಗಳನ್ನು ಪಡೆದುಕೊಂಡ ನಂತರ ಹಣ ಪಾವತಿಸುವವರಿಗೆ ಇದು ಪ್ರಯೋಜನಕಾರಿ ಆಗಲಿದೆ.

ಉತ್ಪನ್ನವು ಕೈಗೆ ಸಿಕ್ಕಿದ ನಂತರ ಹಣ ಪಾವತಿಸುವ ಆಯ್ಕೆಯನ್ನು (ಕ್ಯಾಶ್ ಆನ್‌ ಡೆಲಿವರಿ) ಪಡೆದವರು ಈ ಸೌಲಭ್ಯವನ್ನು ಬಳಸಿಕೊಳ್ಳಬಹುದು. ಕ್ಯೂಆರ್ ಕೋಡ್‌ ಸ್ಕ್ಯಾನ್‌ ಮಾಡಿ, ಯುಪಿಐ ಸೌಲಭ್ಯ ಇರುವ ಯಾವುದೇ ಆ್ಯಪ್ ಮೂಲಕ ಹಣ ಪಾವತಿ ಮಾಡಬಹುದು ಎಂದು ಕಂಪನಿಯ ಪ್ರಕಟಣೆ ತಿಳಿಸಿದೆ.

ವ್ಯಕ್ತಿಗಳ ನಡುವೆ ಅಂತರ ಕಾಪಾಡಿಕೊಳ್ಳಲು ಬಯಸುವ ಸಂದರ್ಭದಲ್ಲಿ ಈ ಬಗೆಯ ಪಾವತಿ ವ್ಯವಸ್ಥೆಯು ಹೆಚ್ಚಿನ ಸುರಕ್ಷತೆಯನ್ನು ಖಾತರಿಪಡಿಸುತ್ತದೆ ಎಂದು ಕಂಪನಿ ಹೇಳಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು