ಬುಧವಾರ, ಮೇ 27, 2020
27 °C

ಅಗತ್ಯ ವಸ್ತುಗಳನ್ನು ಪೂರೈಸಲು ಫ್ಲಿಪ್‌ಕಾರ್ಟ್‌, ಉಬರ್‌ ಒಪ್ಪಂದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ಲಾಕ್‍ಡೌನ್ ಜಾರಿಯಲ್ಲಿರುವುದರಿಂದ ಬೆಂಗಳೂರು, ಮುಂಬೈ ಮತ್ತು ದೆಹಲಿಯ ನಾಗರಿಕರಿಗೆ ಅಗತ್ಯ ವಸ್ತುಗಳನ್ನು ಪೂರೈಸಲು ಇ–ಕಾಮರ್ಸ್‌ನ ಫ್ಲಿಪ್‍ಕಾರ್ಟ್ ಮತ್ತು ಬಾಡಿಗೆ ಟ್ಯಾಕ್ಸಿ ಕಂಪನಿ ಉಬರ್ ಒಪ್ಪಂದ ಮಾಡಿಕೊಂಡಿವೆ.

ಫ್ಲಿಪ್‍ಕಾರ್ಟ್ ಗ್ರಾಹಕರಿಂದ ಹೆಚ್ಚುತ್ತಿರುವ ಬೇಡಿಕೆಗಳ ಹಿನ್ನೆಲೆಯಲ್ಲಿ ಅತ್ಯಂತ ಕಡಿಮೆ ಅವಧಿಯಲ್ಲಿ ಗ್ರಾಹಕರ ಮನೆ ಬಾಗಿಲಿಗೆ ಅಗತ್ಯ ವಸ್ತುಗಳನ್ನು ಪೂರೈಸಲು ಇದರಿಂದ ಸಾಧ್ಯವಾಗಲಿದೆ. ಆರ್ಥಿಕತೆ ಮುನ್ನಡೆಯಲೂ ಈ ಪಾಲುದಾರಿಕೆ ನೆರವಾಗಲಿದೆ.  ಸರ್ಕಾರದ ಮಾರ್ಗಸೂಚಿಗಳ ಅನ್ವಯ ಎಲ್ಲಾ ಚಾಲಕರಿಗೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅವರಿಗೆ ಮಾಸ್ಕ್, ಗ್ಲೌಸ್, ಸ್ಯಾನಿಟೈಸರ್ ಅನ್ನು ನೀಡಲಾಗುತ್ತಿದ್ದು, ಸುರಕ್ಷತೆಯ ಬಗ್ಗೆ ವಿಶೇಷ ತರಬೇತಿಯನ್ನೂ ನೀಡಲಾಗಿದೆ ಎಂದು ಉಬರ್‌ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು