ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ವಿಮಾ ಕಂಪನಿಗಳ ಮುಖ್ಯಸ್ಥರ ಜೊತೆ ಶನಿವಾರ ಸಭೆ ನಡೆಸಿದ್ದು, ವಿಮಾ ಪರಿಹಾರ ಹಣವನ್ನು ಬೇಗನೆ ಇತ್ಯರ್ಥಪಡಿಸಲು ಒತ್ತು ನೀಡುವಂತೆ ಸೂಚನೆ ನೀಡಿದ್ದಾರೆ.
ವರ್ಚುವಲ್ ಸಭೆ ನಡೆಸಿದ ಅವರು, ಕೋವಿಡ್–19 ಸಾಂಕ್ರಾಮಿಕದ ವಿರುದ್ಧ ಹೋರಾಡುತ್ತಿರುವ ಆರೋಗ್ಯ ಕಾರ್ಯಕರ್ತರಿಗೆ ಇರುವ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಪ್ಯಾಕೇಜ್ (ಪಿಎಂಜಿಕೆಪಿ) ವಿಮಾ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿದರು. ಇದೇ ವೇಳೆ, ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ (ಪಿಎಂಜೆಜೆಬಿವೈ) ಅಡಿ ಬಾಕಿ ಇರುವ ವಿಮಾ ಪರಿಹಾರಗಳನ್ನು ತ್ವರಿತವಾಗಿ ಇತ್ಯರ್ಥಪಡಿಸುವಂತೆಯೂ ವಿಮಾ ಕಂಪನಿಗಳಿಗೆ ಸೂಚನೆ ನೀಡಿದರು ಎಂದು ಅಧಿಕೃತ ಪ್ರಟಕಣೆ ತಿಳಿಸಿದೆ.
ಪಿಎಂಕೆಜಿಪಿ ಯೋಜನೆ ಅಡಿಯಲ್ಲಿ ಇದುವರೆಗೆ 419 ಕ್ಲೇಮ್‌ಗಳಿಗೆ ಸಂಬಂಧಿಸಿದಂತೆ ₹ 209.5 ಕೋಟಿ ಮೊತ್ತವನ್ನು ನಾಮಿನಿಗಳ ಖಾತೆಗೆ ವರ್ಗಾಯಿಸಲಾಗಿದೆ. ಪಿಎಂಜೆಜೆಬಿವೈ ಅಡಿಯಲ್ಲಿ 4.65 ಲಕ್ಷ ಕ್ಲೇಮ್‌ಗಳಿಗೆ ಸಂಬಂಧಿಸಿದಂತೆ ₹ 9,307 ಕೋಟಿ ಮೊತ್ತವನ್ನು ವಿತರಿಸಲಾಗಿದೆ ಎಂದು ಪ್ರಕಟಣೆಯು ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.