ನವದೆಹಲಿ: ಪ್ರಧಾನಮಂತ್ರಿ ಇಂಟರ್ನ್ಶಿಪ್ ಯೋಜನೆಗೆ ಮೀಸಲಾದ ಮೊಬೈಲ್ ಅಪ್ಲಿಕೇಷನ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಚಾಲನೆ ನೀಡಿದ್ದಾರೆ.

ಯೋಜನೆಯ ವೆಬ್ಸೈಟ್ ಮತ್ತು ಆ್ಯಪ್ ಹಲವಾರು ಭಾಷೆಗಳಲ್ಲಿ ಲಭ್ಯವಿದೆ. ಈ ಯೋಜನೆಗೆ ಸೇರಲು ಯುವಜನರನ್ನು ಪ್ರೋತ್ಸಾಹಿಸುವಂತೆ ಸಂಸದರಿಗೆ ಮನವಿ ಮಾಡಿದ ಸಚಿವೆ ನಿರ್ಮಲಾ ಸೀತಾರಾಮನ್, ಹೆಚ್ಚಿನ ಕಂಪನಿಗಳು ಈ ಕಾರ್ಯಕ್ರಮಕ್ಕೆ ಸೇರಬೇಕೆಂದು ಹೇಳಿದ್ದಾರೆ. ಈ ಯೋಜನೆಯು ಉದ್ಯಮಕ್ಕೆ ಅಗತ್ಯವಿರುವ ಕೌಶಲಗಳನ್ನು ಮತ್ತು ಉದ್ಯೋಗ ಲಭ್ಯತೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ಹೇಳಿದರು.

2024-25ರ ಆರ್ಥಿಕ ವರ್ಷದಲ್ಲಿ ಯೋಜನೆಯ ಪ್ರಾಯೋಗಿಕ ಭಾಗವಾಗಿ 1.25 ಲಕ್ಷ ಯುವಜನರಿಗೆ ತರಬೇತಿ ನೀಡುವ ಗುರಿ ಹೊಂದಿದೆ. ಆಯ್ಕೆಯಾದವರಿಗೆ 12 ತಿಂಗಳು ತರಬೇತಿ ಜೊತೆಗೆ ಮಾಸಿಕ ₹5 ಸಾವಿರ ಭತ್ಯೆ ನೀಡಲಾಗುತ್ತದೆ. ಅಲ್ಲದೆ, ಸರ್ಕಾರವು ಒಂದು ಬಾರಿಗೆ ₹6 ಸಾವಿರ ಆರ್ಥಿಕ ನೆರವು ನೀಡಲಿದೆ. ಈ ಯೋಜನೆಯಡಿ ಮುಂದಿನ ಐದು ವರ್ಷದಲ್ಲಿ ಒಂದು ಕೋಟಿ ಯುವಜನರಿಗೆ ವೃತ್ತಿ ತರಬೇತಿ ನೀಡುವುದು ಸರ್ಕಾರದ ಗುರಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.