ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಜೆಟ್‌ ಮೂಲಕ ಬೆಳವಣಿಗೆಗೆ ಉತ್ತೇಜನ, ಹಣದುಬ್ಬರ ನಿಯಂತ್ರಣ: ನಿರ್ಮಲಾ ಸೀತಾರಾಮನ್‌

Last Updated 12 ಅಕ್ಟೋಬರ್ 2022, 12:52 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಆರ್ಥಿಕತೆಯು ಸುಸ್ಥಿರ ಬೆಳವಣಿಗೆ ಮತ್ತು ಹಣದುಬ್ಬರಕ್ಕೆ ನಿಯಂತ್ರಣಕ್ಕೆ ಪೂರಕವಾಗಿ ಮುಂದಿನ ವರ್ಷದ ಬಜೆಟ್‌ ಅನ್ನು ಎಚ್ಚರಿಕೆಯಿಂದ ರೂಪಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

ಇಂಧನ ದರವು ಗರಿಷ್ಠ ಮಟ್ಟದಲ್ಲಿ ಇರುವುದೇ ದೇಶದ ಆರ್ಥಿಕತೆಗೆ ಅತಿದೊಡ್ಡ ಸವಾಲಾಗಿದೆ ಎಂದು ಅವರು ತಿಳಿಸಿದ್ದಾರೆ. ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) ಮತ್ತು ವಿಶ್ವಬ್ಯಾಂಕ್‌ನ ಸಭೆಯಲ್ಲಿ ಭಾಗವಹಿಸಲು ಅವರು ಇಲ್ಲಿಗೆ ಬಂದಿದ್ದಾರೆ.

ಮುಂದಿನ ಬಜೆಟ್‌ ಬಗ್ಗೆ ಈಗಲೇ ನಿ‌ರ್ದಿಷ್ಟವಾಗಿ ಹೇಳುವುದು ಕಷ್ಟ. ಆದರೆ, ಒಟ್ಟಾರೆಯಾಗಿ ಆರ್ಥಿಕ ಬೆಳವಣಿಗೆಗೆ ಆದ್ಯತೆ ನೀಡಲಾಗುವುದು. ಹಣದುಬ್ಬರದ ಆತಂಕವನ್ನೂ ಪರಿಹರಿಸಲಾಗುವುದು ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT