ನವದೆಹಲಿ: ಜನವರಿ–ಮಾರ್ಚ್ ತ್ರೈಮಾಸಿಕದಲ್ಲಿ ಶೇಕಡ 19 ರಷ್ಟು ಕುಸಿತ ಕಂಡಿದ್ದ ‘ತ್ವರಿತವಾಗಿ ಬಿಕರಿಯಾಗುವ ಗ್ರಾಹಕ ಉತ್ಪನ್ನಗಳ’ (ಎಫ್‌ಎಂಸಿಜಿ) ಉದ್ಯಮವು ಸೆಪ್ಟೆಂ ಬರ್‌ಗೆ ಕೊನೆಗೊಂಡ ತ್ರೈಮಾಸಿಕದಲ್ಲಿ ಚೇತರಿಕೆಯ ಲಕ್ಷಣಗಳನ್ನು ತೋರಿಸಿದೆ. ಹಿಂದಿನ ವರ್ಷದ ಸೆಪ್ಟೆಂಬರ್ ತ್ರೈಮಾಸಿ ಕಕ್ಕೆ ಹೋಲಿಸಿದರೆ, ಈ ವರ್ಷದ ಸೆಪ್ಟೆಂ ಬರ್ ತ್ರೈಮಾಸಿಕದಲ್ಲಿ ಶೇಕಡ 1.6ರಷ್ಟು ಬೆಳವಣಿಗೆ ಕಂಡಿದೆ ಎಂದು ನೀಲ್ಸನ್ ವರದಿ ಹೇಳಿದೆ.