ಮಂಗಳವಾರ, ಸೆಪ್ಟೆಂಬರ್ 21, 2021
29 °C

ಎಥೆನಾಲ್ ಬಳಸುವ ವಾಹನ ವರ್ಷದಲ್ಲಿ ಮಾರುಕಟ್ಟೆಗೆ ತರಲು ಗಡ್ಕರಿ ಸಲಹೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಸಂಪೂರ್ಣವಾಗಿ ಎಥೆನಾಲ್ ಹಾಗೂ ಗ್ಯಾಸೊಲಿನ್‌ ಬಳಸಿ ಚಲಿಸುವ ವಾಹನಗಳನ್ನು ದೇಶದ ಮಾರುಕಟ್ಟೆಗೆ ಒಂದು ವರ್ಷದೊಳಗೆ ಬಿಡುಗಡೆ ಮಾಡಬೇಕು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ವಾಹನ ಉದ್ಯಮದ ಪ್ರತಿನಿಧಿಗಳಿಗೆ ಸಲಹೆ ಮಾಡಿದ್ದಾರೆ.

ವಾಹನ ತಯಾರಕರು ಎಲ್ಲ ಮಾದರಿಯ ವಾಹನಗಳಲ್ಲಿಯೂ ಕನಿಷ್ಠ ಆರು ಏರ್‌ಬ್ಯಾಗ್‌ಗಳು ಇರುವಂತೆ ನೋಡಿಕೊಳ್ಳಬೇಕು ಎಂದೂ ಗಡ್ಕರಿ ಅವರು ಮನವಿ ಮಾಡಿದ್ದಾರೆ. ಭಾರತೀಯ ಆಟೊಮೊಬೈಲ್‌ ತಯಾರಕರ ಸಂಘದ (ಎಸ್‌ಐಎಎಂ) ಪ್ರತಿನಿಧಿಗಳು ತಮ್ಮನ್ನು ಭೇಟಿಯಾಗಿದ್ದ ಸಂದರ್ಭದಲ್ಲಿ ಈ ವಿಚಾರ ಪ್ರಸ್ತಾಪ ಮಾಡಿರುವುದಾಗಿ ಗಡ್ಕರಿ ಅವರು ಟ್ವೀಟ್ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು