ನವದೆಹಲಿ (ಪಿಟಿಐ): ‘ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಸಂಘರ್ಷವು ತಕ್ಷಣದಲ್ಲಿ ನಿಲ್ಲುವಂತೆ ಕಾಣುತ್ತಿಲ್ಲ. ಹೀಗಾಗಿ, ದೇಶದ ನಾಗರಿಕರು ವಿದೇಶಿ ವಿನಿಮಯ ಮೀಸಲನ್ನು ಸಾಧ್ಯವಾದಷ್ಟು ಮಟ್ಟಿಗೆ ಉಳಿಸಲು ಪ್ರಯತ್ನಿಸಬೇಕು’ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

‘ನಾವು ಇಂದು ಕಷ್ಟದ ಸಂದರ್ಭದಲ್ಲಿ ಇದ್ದೇವೆ. ನಮ್ಮಿಂದ ಯಾವುದೇ ತಪ್ಪಾಗಿಲ್ಲ. ಆದರೆ, ನಮ್ಮ ನೆರೆಯ ಎರಡು ದೇಶಗಳ ನಡುವಿನ ಯುದ್ಧದಿಂದ ಇಡೀ ಜಗತ್ತು ತೊಂದರೆಗೆ ಒಳಗಾಗಿದೆ. ಯುದ್ಧವು ಈಗಲೂ ನಿರಂತರವಾಗಿ ನಡೆಯುತ್ತಿದ್ದು, ಶಾಂತಿ ಇನ್ನೂ ಬಹುದೂರದಲ್ಲಿದೆ. ಇದು ಬಹಳ ಕಷ್ಟಕರವಾದ ಸಮಯ’ ಎಂದು ಭಾರತೀಯ ಕೈಗಾರಿಕಾ ಒಕ್ಕೂಟದ (ಸಿಐಐ) ವ್ಯಾಪಾರ ಶೃಂಗಸಭೆಯಲ್ಲಿ ಸೋಮವಾರ ಹೇಳಿದ್ದಾರೆ.

ಬಿಕ್ಕಟ್ಟಿನ ವೇಳೆ ನಾಗರಿಕರು ಮಹತ್ವದ ಪಾತ್ರ ವಹಿಸಬೇಕಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶಿ ವಿನಿಮಯ ಮೀಸಲಿಗೆ ಸಂಬಂಧಿಸಿ ವೆಚ್ಚ ಕಡಿಮೆ ಮಾಡುವಂತೆ ಮನವಿ ಮಾಡಿದ್ದಾರೆ. ನಮ್ಮ ಜೀವನದಲ್ಲಿ, ಕೆಲಸದಲ್ಲಿ ಸಾಧ್ಯವಾದಷ್ಟು ವಿದೇಶಿ ವಿನಿಮಯವನ್ನು ಉಳಿಸಲು ಶ್ರಮಿಸಬೇಕಿದೆ. ಜೊತೆಗೆ, ವಿದೇಶಿ ವಿನಿಮಯ ಮೀಸಲು ಸಂಗ್ರಹವನ್ನು ಹೆಚ್ಚಿಸಿಕೊಳ್ಳಬೇಕಾದ ಅಗತ್ಯವಿದೆ ಎಂದು ವೈಷ್ಣವ್ ಹೇಳಿದ್ದಾರೆ.

ಪೆಟ್ರೋಲ್ ಮತ್ತು ಡೀಸೆಲ್ ಕಡಿಮೆ ಬಳಸಿ. ಮೆಟ್ರೊ, ಕಾರ್ ಪೂಲಿಂಗ್, ಗರಿಷ್ಠ ಪ್ರಮಾಣದಲ್ಲಿ ವಿದ್ಯುತ್ ಚಾಲಿತ ವಾಹನಗಳನ್ನು ಬಳಸುವುದು, ಪಾರ್ಸೆಲ್ಗಳನ್ನು ಸಾಗಿಸಲು ರೈಲು ಸೇವೆಯನ್ನು ಬಳಸುವುದು ಮತ್ತು ಮನೆಯಿಂದಲೇ ಕೆಲಸ ಮಾಡುವ ಮೂಲಕ ವಿದೇಶಿ ವಿನಿಮಯ ಮೀಸಲು ಸಂಗ್ರಹವನ್ನು ಉಳಿಸುವಂತೆ ದೇಶದ ಜನರಿಗೆ ಪ್ರಧಾನಿ ಮೋದಿ ಅವರು ಭಾನುವಾರ ಕರೆ ನೀಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-51-1402306507

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.