ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದ ಮಾರುಕಟ್ಟೆಯಿಂದ ₹25,200 ಕೋಟಿ ಹಿಂತೆಗೆದ ವಿದೇಶಿ ಬಂಡವಾಳ ಹೂಡಿಕೆದಾರರು

Last Updated 15 ಮೇ 2022, 10:53 IST
ಅಕ್ಷರ ಗಾತ್ರ

ನವದೆಹಲಿ: ವಿದೇಶಿ ಬಂಡವಾಳ ಹೂಡಿಕೆದಾರರು (ಎಫ್‌ಪಿಐ) ಭಾರತದ ಮಾರುಕಟ್ಟೆಯಿಂದ ನಿರಂತರವಾಗಿ ಬಂಡವಾಳ ಹಿಂದಕ್ಕೆ ಪಡೆಯುತ್ತಲೇ ಇದ್ದಾರೆ.

ಮೇ 2 ರಿಂದ 13ರವರೆಗಿನ ಅವಧಿಯಲ್ಲಿ ಷೇರುಪೇಟೆಯಿಂದ ₹ 25,200 ಕೋಟಿ ಬಂಡವಾಳ ಹಿಂದಕ್ಕೆ ಪಡೆದಿದ್ದಾರೆ. ಜಾಗತಿಕ ಮಟ್ಟದಲ್ಲಿ ಬಡ್ಡಿದರ ಹೆಚ್ಚಳ ಆಗಿರುವುದು ಮತ್ತು ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದೇ ಇದಕ್ಕೆ ಕಾರಣವಾಗಿದೆ.

‘ಕಚ್ಚಾ ತೈಲ ದರ ಗರಿಷ್ಠ ಮಟ್ಟದಲ್ಲಿ ಇರುವುದು, ಹಣದುಬ್ಬರ ಏರಿಕೆ, ಕೇಂದ್ರೀಯ ಬ್ಯಾಂಕ್‌ಗಳು ಹಣಕಾಸು ನೀತಿಯನ್ನು ಬಿಗಿಗೊಳಿಸುತ್ತಿರುವುದು ಷೇರುಪೇಟೆಯ ಮೇಲೆ ಪರಿಣಾಮ ಉಂಟುಮಾಡುತ್ತಿವೆ. ಅಲ್ಲದೆ, ಜಾಗತಿಕವಾಗಿ ಹಣದುಬ್ಬರವು ಭಾರಿ ಏರಿಕೆ ಕಾಣುತ್ತಿರುವುದರಿಂದ ಹೂಡಿಕೆದಾರರು ಆರ್ಥಿಕ ಬೆಳವಣಿಯ ಬಗ್ಗೆ ಆತಂಕ ಹೊಂದಿದ್ದಾರೆ. ಈ ಎಲ್ಲಾ ಕಾರಣಗಳಿಂದ ಅಲ್ಪಾವಧಿಯಲ್ಲಿ ಎಫ್‌ಪಿಐ ಒಳಹರಿವು ಅಸ್ಥಿರವಾಗಿರಲಿದೆ’ ಎಂದು ಕೋಟಕ್‌ ಸೆಕ್ಯುರಿಟೀಸ್‌ನ ಈಕ್ವಿಟಿ ರಿಸರ್ಚ್‌ನ ಮುಖ್ಯಸ್ಥ ಶ್ರೀಕಾಂತ್‌ ಚೌಹಾಣ್‌ ಹೇಳಿದ್ದಾರೆ.

2022ರ ಏಪ್ರಿಲ್‌ವರೆಗೆ ನಿರಂತರವಾಗಿ ಏಳನೇ ತಿಂಗಳಿನಲ್ಲಿಯೂ ಮಾರಾಟಕ್ಕೆ ಗಮನ ನೀಡಿದ್ದಾರೆ. ಷೇರುಪೇಟೆಯಿಂದ ಒಟ್ಟಾರೆ ₹ 1.65 ಲಕ್ಷ ಕೋಟಿ ಬಂಡವಾಳ ಹಿಂದಕ್ಕೆ ಪಡೆದಿದ್ದಾರೆ. ಮೇ 2 ರಿಂದ 13ರವರೆಗಿನ ಅವಧಿಯಲ್ಲಿ ಸಾಲಪತ್ರ ಮಾರುಕಟ್ಟೆಯಿಂದಲೂ ₹ 4,342 ಕೋಟಿ ಬಂಡವಾಳ ಹಿಂದಕ್ಕೆ ಪಡೆದಿದ್ದಾರೆ.

ಪ್ರವರ್ಧಮಾನಕ್ಕೆ ಬರುತ್ತಿರುವ ತೈವಾನ್‌, ದಕ್ಷಿಣ ಕೊರಿಯಾ ಮತ್ತು ಪಿಲಿಪ್ಪೀನ್ಸ್ ಮಾರುಕಟ್ಟೆಗಳಿಂದಲೂ ಮೇನಲ್ಲಿ ಬಂಡವಾಳ ಹೊರಹರಿವು ಕಂಡುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT