ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಫ್‌ಪಿಐ: ₹ 1,472 ಕೋಟಿ ಹಿಂತೆಗೆತ

Last Updated 17 ಅಕ್ಟೋಬರ್ 2021, 14:36 IST
ಅಕ್ಷರ ಗಾತ್ರ

ನವದೆಹಲಿ: ವಿದೇಶಿ ಬಂಡವಾಳ ಹೂಡಿಕೆದಾರರು (ಎಫ್‌ಪಿಐ) ಅಕ್ಟೋಬರ್ ತಿಂಗಳಿನಲ್ಲಿ ಈವರೆಗೆ ಬಂಡವಾಳ ಮಾರುಕಟ್ಟೆಯಿಂದ ₹ 1,472 ಕೋಟಿ ಬಂಡವಾಳ ಹಿಂದಕ್ಕೆ ಪಡೆದಿದ್ದಾರೆ.

ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯ ಇಳಿಕೆ ಮತ್ತು ಮತ್ತು ಜಾಗತಿಕ ವಿದ್ಯಮಾನಗಳ ಕಾರಣಕ್ಕಾಗಿ ಬಂಡವಾಳ ಹಿಂತೆಗೆತ ಕಂಡುಬಂದಿದೆ ಎಂದು ತಜ್ಞರು ಹೇಳಿದ್ದಾರೆ.

ವಿದೇಶಿ ಬಂಡವಾಳ ಹೂಡಿಕೆದಾರರು ಒಟ್ಟು ₹ 226 ಕೋಟಿ ಮೊತ್ತದ ಷೇರುಗಳನ್ನು ಖರೀದಿಸಿದ್ದರೆ, ₹ 1,698 ಕೋಟಿ ಮೌಲ್ಯದ ಸಾಲಪತ್ರಗಳನ್ನು ಮಾರಾಟ ಮಾಡಿದ್ದಾರೆ. ಇದರಿಂದ ಒಟ್ಟಾರೆ ಹಿಂತೆಗೆತವು ₹ 1,472 ಕೋಟಿಗಳಷ್ಟಾಗಿದೆ.

ಇದಕ್ಕೂ ಹಿಂದಿನ ಎರಡು ತಿಂಗಳುಗಳಲ್ಲಿ ಸಾಲಪತ್ರಗಳಲ್ಲಿ ಹೂಡಿಕೆ ಮಾಡಿದ್ದರು. ಆಗಸ್ಟ್ ತಿಂಗಳಿನಲ್ಲಿ ₹ 14,376 ಕೋಟಿ ಹಾಗೂ ಸೆಪ್ಟೆಂಬರ್ ತಿಂಗಳಿನಲ್ಲಿ ₹ 13,363 ಕೋಟಿ ಹೂಡಿಕೆ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT