ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದೇಶಿ ವಿನಿಮಯ ಸಂಗ್ರಹ ಹೆಚ್ಚಳ

Last Updated 1 ಜೂನ್ 2019, 19:45 IST
ಅಕ್ಷರ ಗಾತ್ರ

ಮುಂಬೈ: ದೇಶದ ವಿದೇಶಿವಿನಿಮಯಮೀಸಲು ಸಂಗ್ರಹ ಮೇ 24ಕ್ಕೆ ಕೊನೆಗೊಂಡ ವಾರದಲ್ಲಿ₹1,393 ಕೋಟಿ ಹೆಚ್ಚಾಗಿ ₹ 29.40 ಲಕ್ಷ ಕೋಟಿಗಳಿಗೆ ಏರಿಕೆಯಾಗಿದೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಮಾಹಿತಿ ನೀಡಿದೆ. ಅದಕ್ಕೂ ಹಿಂದಿನ ವಾರದಲ್ಲಿ₹ 29.19 ಲಕ್ಷ ಕೋಟಿಗಳಷ್ಟಿತ್ತು.

ವಿದೇಶಿಕರೆನ್ಸಿಗಳ ಸಂಗ್ರಹ₹ 1,393ಕೋಟಿ ಹೆಚ್ಚಾಗಿ₹ 27.44 ಲಕ್ಷ ಕೋಟಿಗಳಿಗೆ ತಲುಪಿದೆ. ಇದರಿಂದಾಗಿವಿದೇಶಿವಿನಿಮಯಸಂಗ್ರಹದಲ್ಲಿ ಏರಿಕೆಯಾಗಿದೆ. ಚಿನ್ನದ ಮೀಸಲು ಸಂಗ್ರಹ ₹ 1.61 ಲಕ್ಷ ಕೋಟಿಗಳಷ್ಟಿದೆ.

ಐಎಂಎಫ್‌ನಲ್ಲಿ ಭಾರತದ ಕರೆನ್ಸಿ ಸಂಗ್ರಹ ₹ 1,400 ಕೋಟಿಗಳಷ್ಟು ಹೆಚ್ಚಾಗಿ ₹ 23,310 ಕೋಟಿಗಳಿಗೆ ತಲುಪಿದೆ.

ದೇಶದ ವಿದೇಶಿ ವಿನಿಮಯ ಮೀಸಲು ಸಂಗ್ರಹ 2018ರ ಏಪ್ರಿಲ್‌ 23ರಂದು ಸಾರ್ವಕಾಲಿಕ ಗರಿಷ್ಠ ಮಟ್ಟವಾದ ₹ 29.82 ಲಕ್ಷ ಕೋಟಿಗಳಿಗೆ ತಲುಪಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT