ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದೇಶಿ ವಿನಿಮಯ ಸಂಗ್ರಹ ಹೆಚ್ಚಳ

Last Updated 18 ಮೇ 2019, 20:00 IST
ಅಕ್ಷರ ಗಾತ್ರ

ಮುಂಬೈ: ದೇಶದ ವಿದೇಶಿ ವಿನಿಮಯ ಮೀಸಲು ಸಂಗ್ರಹ ಮೇ 17ಕ್ಕೆ ಕೊನೆಗೊಂಡ ವಾರದಲ್ಲಿ ₹ 9,520 ಕೋಟಿ ಹೆಚ್ಚಾಗಿ ₹ 29.40 ಲಕ್ಷ ಕೋಟಿಗಳಿಗೆ ಏರಿಕೆಯಾಗಿದೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಮಾಹಿತಿ ನೀಡಿದೆ.

ಅದಕ್ಕೂ ಹಿಂದಿನ ವಾರದಲ್ಲಿ ₹ 29.30 ಲಕ್ಷ ಕೋಟಿಗಳಷ್ಟಿತ್ತು.

ವಿದೇಶಿ ಕರೆನ್ಸಿಗಳ ಸಂಗ್ರಹ ₹ 9,450 ಕೋಟಿ ಹೆಚ್ಚಾಗಿ ₹ 27.44 ಲಕ್ಷ ಕೋಟಿಗಳಿಗೆ ತಲುಪಿದೆ. ಇದರಿಂದಾಗಿ ವಿದೇಶಿ ವಿನಿಮಯ ಸಂಗ್ರಹದಲ್ಲಿ ಏರಿಕೆಯಾಗಿದೆ.

ಚಿನ್ನದ ಮೀಸಲು ಸಂಗ್ರಹ ₹ 1.61 ಲಕ್ಷ ಕೋಟಿಗಳಷ್ಟಿದೆ.

ಅಂತರರಾಷ್ಟ್ರೀಯ ಹಣಕಾಸು ನಿಧಿಯಲ್ಲಿನ (ಐಎಂಎಫ್‌) ಭಾರತದ ಕರೆನ್ಸಿ ಸಂಗ್ರಹ ₹ 4,900 ಕೋಟಿಗಳಷ್ಟು ಹೆಚ್ಚಾಗಿ ₹ 23,450 ಕೋಟಿಗಳಿಗೆ ತಲುಪಿದೆ.

ದೇಶದ ವಿದೇಶಿ ವಿನಿಮಯ ಮೀಸಲು ಸಂಗ್ರಹ 2018ರ ಏಪ್ರಿಲ್‌ 23ರಂದುಸಾರ್ವಕಾಲಿಕ ಗರಿಷ್ಠ ಮಟ್ಟವಾದ ₹ 29.82 ಲಕ್ಷ ಕೋಟಿಗಳಿಗೆ ತಲುಪಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT