ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದೇಶಿ ವಿನಿಮಯ ಸಂಗ್ರಹ ಹೆಚ್ಚಳ

Last Updated 4 ಮೇ 2019, 19:30 IST
ಅಕ್ಷರ ಗಾತ್ರ

ಮುಂಬೈ: ದೇಶದ ವಿದೇಶಿ ವಿನಿಮಯ ಮೀಸಲು ಸಂಗ್ರಹ ಡಿಸೆಂಬರ್ 21ಕ್ಕೆ ಕೊನೆಗೊಂಡ ವಾರದಲ್ಲಿ ₹1169 ಕೋಟಿ ಹೆಚ್ಚಾಗಿ, ₹ 27.53 ಲಕ್ಷ ಕೋಟಿಗೆ ಏರಿಕೆಯಾಗಿದೆ.

ವಿದೇಶಿ ಕರೆನ್ಸಿಗಳ ಸಂಗ್ರಹದಲ್ಲಿನ ಹೆಚ್ಚಳದಿಂದ ಮೀಸಲು ಸಂಗ್ರಹದಲ್ಲಿ ಏರಿಕೆ ಕಂಡುಬಂದಿದೆ ಎಂದುಆರ್‌ಬಿಐ ಮಾಹಿತಿ ನೀಡಿದೆ.

ಇದಕ್ಕೂ ಹಿಂದಿನ ವಾರದಲ್ಲಿ ₹ 27.51 ಲಕ್ಷ ಕೋಟಿ ಇತ್ತು. ಚಿನ್ನದ ಮೀಸಲು ಸಂಗ್ರಹ ₹ 259 ಕೋಟಿ ಹೆಚ್ಚಾಗಿ ₹ 1.48 ಲಕ್ಷ ಕೋಟಿಗೆ ತಲುಪಿದೆ.

ಅಂತರರಾಷ್ಟ್ರೀಯ ಹಣಕಾಸು ನಿಧಿಯಲ್ಲಿನ (ಐಎಂಎಫ್‌) ಭಾರತದ ಕರೆನ್ಸಿ ಸಂಗ್ರಹ 111 ಕೋಟಿ ಹೆಚ್ಚಾಗಿ ₹ 18,410 ಕೋಟಿಗೆ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT