ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದೇಶಿ ವಿನಿಮಯ ಸಂಗ್ರಹ ಹೆಚ್ಚಳ

Last Updated 29 ಫೆಬ್ರುವರಿ 2020, 18:30 IST
ಅಕ್ಷರ ಗಾತ್ರ

ಮುಂಬೈ: ದೇಶದ ವಿದೇಶಿ ವಿನಿಮಯ ಮೀಸಲು ಸಂಗ್ರಹ ಫೆಬ್ರುವರಿ 21ಕ್ಕೆ ಕೊನೆಗೊಂಡ ವಾರದಲ್ಲಿ ₹ 205 ಕೋಟಿ ಹೆಚ್ಚಾಗಿ ಸಾರ್ವಕಾಲಿಕ ಗರಿಷ್ಠ ಮಟ್ಟವಾದ ₹ 33.80 ಲಕ್ಷ ಕೋಟಿಗೆ ಏರಿಕೆಯಾಗಿದೆ ಎಂದು ಆರ್‌ಬಿಐ ತಿಳಿಸಿದೆ.

ಅದಕ್ಕೂ ಹಿಂದಿನ ವಾರ 33.79 ಲಕ್ಷ ಕೋಟಿಗಳಿಗೆ ತಲುಪಿತ್ತು.

ಚಿನ್ನದ ಸಂಗ್ರಹದಲ್ಲಿ ಏರಿಕೆ ಆಗಿರುವುದರಿಂದ ವಿದೇಶಿ ವಿನಿಮಯ ಸಂಗ್ರಹ ಹೆಚ್ಚಾಗಿದೆ ಎಂದು ಹೇಳಿದೆ. ಚಿನ್ನದ ಮೀಸಲು ಸಂಗ್ರಹ ಸತತ ಎರಡನೇವಾರವೂ ಹೆಚ್ಚಾಗಿದ್ದು, ₹ 2.10 ಲಕ್ಷ ಕೋಟಿಗಳಿಗೆ ಏರಿಕೆಯಾಗಿದೆ.

ಒಟ್ಟಾರೆ ಮೀಸಲು ಸಂಗ್ರಹದಲ್ಲಿ ವಿದೇಶಿ ಕರೆನ್ಸಿಗಳ ಸಂಗ್ರಹವು ₹ 3,479 ಕೋಟಿ ಇಳಿಕೆಯಾಗಿದ್ದು, ₹ 31.31 ಲಕ್ಷ ಕೋಟಿಗಳಿಗೆ ತಲುಪಿದೆ.

ಅಂತರರಾಷ್ಟ್ರೀಯ ಹಣಕಾಸು ನಿಧಿಯಲ್ಲಿನ ಭಾರತದ ಕರೆನ್ಸಿ ಸಂಗ್ರಹವು ₹ 10.65 ಕೋಟಿ ಕಡಿಮೆಯಾಗಿ ₹ 25,347 ಕೋಟಿಗಳಿಗೆ ಇಳಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT