ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದೇಶಿ ವಿನಿಮಯ ಸಂಗ್ರಹ ಹೆಚ್ಚಳ

Published 20 ಅಕ್ಟೋಬರ್ 2023, 15:55 IST
Last Updated 20 ಅಕ್ಟೋಬರ್ 2023, 15:55 IST
ಅಕ್ಷರ ಗಾತ್ರ

ಮುಂಬೈ: ದೇಶದ ವಿದೇಶಿ ವಿನಿಮಯ ಮೀಸಲು ಸಂಗ್ರಹವು ಹಲವು ವಾರಗಳ ಬಳಿಕ ಏರಿಕೆ ಕಂಡಿದೆ. ಅಕ್ಟೋಬರ್ 13ಕ್ಕೆ ಕೊನೆಗೊಂಡ ವಾರದಲ್ಲಿ ₹9,545 ಕೋಟಿ ಹೆಚ್ಚಾಗಿ ₹48.63 ಲಕ್ಷ ಕೋಟಿಗೆ ತಲುಪಿದೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ ತಿಳಿಸಿದೆ.

ಅಕ್ಟೋಬರ್ 6ಕ್ಕೆ ಕೊನೆಗೊಂಡ ವಾರದಲ್ಲಿ ಮೀಸಲು ಸಂಗ್ರಹವು ₹48.55 ಲಕ್ಷ ಕೋಟಿಯಷ್ಟು ಇತ್ತು. 

ಮೀಸಲು ಸಂಗ್ರಹದಲ್ಲಿ ಹೆಚ್ಚಿನ ಪಾಲು ಹೊಂದಿರುವ ವಿದೇಶಿ ಕರೆನ್ಸಿಗಳ ಸಂಗ್ರಹವು ಅಕ್ಟೋಬರ್ 13ಕ್ಕೆ ಕೊನೆಗೊಂಡ ವಾರದಲ್ಲಿ ₹1480 ಕೋಟಿಯಷ್ಟು ಕಡಿಮೆ ಆಗಿ ₹43.07 ಲಕ್ಷ ಕೋಟಿಗೆ ಇಳಿಕೆ ಕಂಡಿದೆ.

ಚಿನ್ನದ ಮೀಸಲು ಸಂಗ್ರಹವು ₹10,458 ಕೋಟಿ ಹೆಚ್ಚಾಗಿ ₹3.61 ಲಕ್ಷ ಕೋಟಿಗೆ ತಲುಪಿದೆ. ಅಂತರರಾಷ್ಟ್ರೀಯ ಹಣಕಾಸು ನಿಧಿಯಲ್ಲಿನ ಭಾರತದ ಮೀಸಲು ಸಂಗ್ರಹವು ₹66 ಕೋಟಿಯಷ್ಟು ಇಳಿಕೆ ಕಂಡಿದ್ದು ₹41,251 ಕೋಟಿಯಷ್ಟು ಆಗಿದೆ ಎಂದು ಆರ್‌ಬಿಐ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT