ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಷೇರುಪೇಟೆ ಮಹಾಪತನ: ಇ.ಡಿ ನಿವೃತ್ತ ಐಎಎಸ್‌ ಅಧಿಕಾರಿ ವಿಚಾರಣೆಗೆ ಆಗ್ರಹ

Published 6 ಜೂನ್ 2024, 15:37 IST
Last Updated 6 ಜೂನ್ 2024, 15:37 IST
ಅಕ್ಷರ ಗಾತ್ರ

ನವದೆಹಲಿ: ದೇಶದ ಷೇರುಪೇಟೆಗಳು ಮಂಗಳವಾರದ ವಹಿವಾಟಿನಲ್ಲಿ ಮಹಾಪತನ ಕಂಡಿದ್ದು, ಇದರ ಹಿಂದಿರುವ ನೈಜ ಕಾರಣವನ್ನು ಪತ್ತೆ ಹಚ್ಚಲು ಜಾರಿ ನಿರ್ದೇಶನಾಲಯದಿಂದ ವಿಚಾರಣೆ ನಡೆಸಬೇಕಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯದ ಕಾರ್ಯದರ್ಶಿಯಾಗಿದ್ದ ನಿವೃತ್ತ ಐಎಎಸ್‌ ಅಧಿಕಾರಿ ಇ.ಎ.ಎಸ್‌.  ಶರ್ಮಾ ಒತ್ತಾಯಿಸಿದ್ದಾರೆ.

ಈ ಕುರಿತು ಕೇಂದ್ರ ಹಣಕಾಸು ವ್ಯವಹಾರಗಳ ಕಾರ್ಯದರ್ಶಿ ಅಜಯ್‌ ಸೇಠ್‌ ಅವರಿಗೆ ಪತ್ರ ಬರೆದಿದ್ದಾರೆ.

‘ಜೂನ್‌ 3 ಮತ್ತು 4ರಂದು ಮಾರುಕಟ್ಟೆಯಲ್ಲಿನ ಏರಿಳಿತ ಸಂಬಂಧಿಸಿದಂತೆ ಭಾರತೀಯ ಷೇರು ನಿಯಂತ್ರಣ ಮಂಡಳಿಯು ಯಾವ ಕ್ರಮಕೈಗೊಂಡಿದೆ ಅಥವಾ ಇದರ ಹಿಂದಿನ ನೈಜ ಕಾರಣವನ್ನು ಪತ್ತೆಹಚ್ಚಲು ತನಿಖೆ ಆರಂಭಿಸಿದೆಯೇ ಎಂಬ ಬಗ್ಗೆ ತಿಳಿಯಬೇಕಿದೆ. ಹಾಗಾಗಿ, ಇ.ಡಿಯಿಂದ ವಿಚಾರಣೆ ನಡೆಸಬೇಕಿದೆ’ ಎಂದು ಕೋರಿದ್ದಾರೆ.

‘ಸೂಚ್ಯಂಕಗಳ ಏರಿಳಿತದಿಂದ ಸಣ್ಣ ಮತ್ತು ಮಧ್ಯಮ ಹೂಡಿಕೆದಾರರ ಹಣ ಕರಗಿ ಹೋಗಿದೆ. ಷೇರುಪೇಟೆಯ ಲಾಭಕೋರರು ಇದರ ಲಾಭ ಪಡೆದಿದ್ದಾರೆ. ಇಂದಿಗೂ ಮಾರುಕಟ್ಟೆಗಳು ಚೇತರಿಕೆ ಕಂಡಿಲ್ಲ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT