ಗುರುವಾರ , ಫೆಬ್ರವರಿ 27, 2020
19 °C

ವಿದೇಶಿ ಬಂಡವಾಳ ಹೂಡಿಕೆ ₹5,177 ಕೋಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ವಿದೇಶಿ ಬಂಡವಾಳ ಹೂಡಿಕೆದಾರರು (ಎಫ್‌ಪಿಐ) ಫೆಬ್ರುವರಿ 3 ರಿಂದ 7ರವರೆಗೆ ಬಂಡವಾಳ ಮಾರುಕಟ್ಟೆಯಲ್ಲಿ
₹5,177 ಕೋಟಿ ಹೂಡಿಕೆ ಮಾಡಿದ್ದಾರೆ.

ಈ ವಾರದಲ್ಲಿ ಸಾಲಪತ್ರಗಳ ಖರೀದಿಗೆ ಆಸಕ್ತಿ ತೋರಿದ್ದು, ಷೇರುಪೇಟೆಯಲ್ಲಿ ಮಾರಾಟಕ್ಕೆ ಗಮನ ನೀಡಿದ್ದಾರೆ. ₹6,350 ಕೋಟಿ ಮೌಲ್ಯದ ಸಾಲಪತ್ರಗಳನ್ನು ಖರೀದಿಸಿದ್ದರೆ, ₹1,172 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ.

ಚೀನಾದ ಕೊರೊನಾ ವೈರಸ್‌ ಜಾಗತಿಕ ಷೇರುಪೇಟೆಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ. ಇದರಿಂದಾಗಿ ಭಾರತದಂತಹ ಪ್ರವರ್ಧಮಾನಕ್ಕೆ ಬರುತ್ತಿರುವ ದೇಶಗಳಲ್ಲಿ ಬಂಡವಾಳ ತೊಡಗಿಸಲು ಹೂಡಿಕೆದಾರರು ಹಿಂಜರಿಯುತ್ತಿದ್ದಾರೆ ಎಂದು ತಜ್ಞರು ಹೇಳಿದ್ದಾರೆ.

ಬಜೆಟ್‌ನಲ್ಲಿ ಘೋಷಿಸಿರುವ ಸುಧಾರಣಾ ಕ್ರಮಗಳಿಂದಾಗಿ ಮುಂದಿನ ದಿನಗಳಲ್ಲಿ ಬಂಡವಾಳ ಒಳಹರಿವು ಹೆಚ್ಚಾಗುವ ನಿರೀಕ್ಷೆ ಇದೆ ಎಂದೂ ಹೇಳಿದ್ದಾರೆ. ಕಾರ್ಪೊರೇಟ್‌ ಬಾಂಡ್‌ಗಳಲ್ಲಿ ಎಫ್‌ಪಿಐ ಹೂಡಿಕೆ ಮಿತಿಯನ್ನು ಶೇ 9 ರಿಂದ ಶೇ 15ಕ್ಕೆ ಹೆಚ್ಚಿಸಲು ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿದೆ. ಇದರಿಂದಾಗಿ ಹೂಡಿಕೆ ಇನ್ನಷ್ಟು ಹೆಚ್ಚಾಗುವ ನಿರೀಕ್ಷೆ ಮಾಡಲಾಗಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು