ಶನಿವಾರ, ಡಿಸೆಂಬರ್ 14, 2019
21 °C

ಎಫ್‌ಪಿಐ ಹೂಡಿಕೆ ₹ 19,203 ಕೋಟಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ವಿದೇಶಿ ಬಂಡವಾಳ ಹೂಡಿಕೆದಾರರು (ಎಫ್‌ಪಿಐ) ನವೆಂಬರ್‌ 1 ರಿಂದ 15ರವರೆಗೆ ಬಂಡವಾಳ ಮಾರುಕಟ್ಟೆಯಲ್ಲಿ ₹ 19,203 ಕೋಟಿ ಹೂಡಿಕೆ ಮಾಡಿದ್ದಾರೆ.

ದೇಶಿ ಮತ್ತು ಜಾಗತಿಕ ವಿದ್ಯಮಾನಗಳ ಸಕಾರಾತ್ಮಕ ಬೆಳವಣಿಗೆಗಳಿಂದಾಗಿ ಹೂಡಿಕೆ ಮಾಡಿದ್ದಾರೆ ಎಂದು ತಜ್ಞರು ವಿಶ್ಲೇಷಣೆ ಮಾಡಿದ್ದಾರೆ. ಹೂಡಿಕೆದಾರುರ ₹ 14,436 ಕೋಟಿ ಮೌಲ್ಯದ ಷೇರುಗಳನ್ನು ಹಾಗೂ ₹ 4,767 ಕೋಟಿ ಮೌಲ್ಯದ ಸಾಲಪತ್ರಗಳನ್ನು ಖರೀದಿಸಿದ್ದಾರೆ. ಅಕ್ಟೋಬರ್‌ನಲ್ಲಿ ₹ 16,465 ಕೋಟಿ, ಸಪ್ಟೆಂಬರ್‌ನಲ್ಲಿ ₹ 6,558 ಕೋಟಿ ಹೂಡಿಕೆ ಮಾಡಿದ್ದರು.

ಎಫ್‌ಪಿಐ ಒಳಹರಿವು ಷೇರುಪೇಟೆಯ ಮೇಲಿನ ಹೂಡಿಕೆದಾರರ ವಿಶ್ವಾಸವನ್ನು ಸೂಚಿಸುತ್ತಿದೆ. ಜುಲೈ ಮತ್ತು ಆಗಸ್ಟ್‌ನಲ್ಲಿ ಬಂಡವಾಳ ಹಿಂದಕ್ಕೆ ಪಡೆದಿದ್ದರು. ಆ ಬಳಿಕ ಹೂಡಿಕೆ ಮಾಡುತ್ತಿದ್ದಾರೆ.

‘ಗರಿಷ್ಠ ಸರ್ಚಾರ್ಜ್‌ ಹಿಂದಕ್ಕೆ ಪಡೆದಿರುವುದು, ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳಿಗೆ ಮರುಬಂಡವಾಳದಂತಹ ಸುಧಾರಣಾ ಕ್ರಮಗಳಿಂದಾಗಿ ಒಳಹರಿವು ಹೆಚ್ಚಾಗುತ್ತಿದೆ’ ಎಂದು ಮಾರ್ನಿಂಗ್‌ಸ್ಟಾರ್‌ ಇನ್‌ವೆಸ್ಟ್‌ಮೆಂಟ್‌ ಅಡ್ವೈಸರ್ ಇಂಡಿಯಾದ ಹಿರಿಯ ವಿಶ್ಲೇಷಕ ಹಿಮಾಂಶು ಶ್ರೀವಾಸ್ತವ ಅವರು ಹೇಳಿದ್ದಾರೆ.

‘ಜಾಗತಿಕ ಮಟ್ಟದಲ್ಲಿ, ಅಮೆರಿಕ–ಚೀನಾ ವಾಣಿಜ್ಯ ಬಿಕ್ಕಟ್ಟು ಬಗೆಹರಿಯವು ನಿರೀಕ್ಷೆಯು ಸಕಾರಾತ್ಮಕ ಚಟುವಟಿಕೆಗೆ ಕಾರಣವಾಗಿದೆ’ ಎಂದು ಕಾರ್ವಿ ಸ್ಟಾಕ್ ಬ್ರೋಕಿಂಗ್‌ನ ವಿಶ್ಲೇಷಕ ಅರುಣ್‌ ಮಂತ್ರಿ ಹೇಳಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು