ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 6 ಸಾವಿರ ಕೋಟಿ ಎಫ್‌ಪಿಐ ಹೊರಹರಿವು

Last Updated 27 ಜನವರಿ 2019, 20:15 IST
ಅಕ್ಷರ ಗಾತ್ರ

ನವದೆಹಲಿ: ಭಾರತದ ಷೇರುಪೇಟೆಗಳಿಂದ ವಿದೇಶಿ ಬಂಡವಾಳ (ಎಫ್‌ಪಿಐ) ಹೊರಹರಿವು ಮುಂದುವರಿಯಲಿದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.

ವಿದೇಶಿ ಹೂಡಿಕೆದಾರರು ಭಾರತದ ಷೇರುಪೇಟೆಗಳಿಂದ ಜನವರಿ 1 ರಿಂದ 25ರ ವರೆಗೆ ₹ 6 ಸಾವಿರ ಕೋಟಿ ಬಂಡವಾಳ ಹಿಂದಕ್ಕೆ ಪಡೆದಿದ್ದಾರೆ.

ನವೆಂಬರ್‌ ಮತ್ತು ಡಿಸೆಂಬರ್‌ನಲ್ಲಿ ಒಟ್ಟಾರೆ ₹ 8,584 ಕೋಟಿ ಮೌಲ್ಯದ ಷೇರುಗಳನ್ನು ಖರೀದಿ ಮಾಡಿದ್ದರು. ಅಕ್ಟೋಬರ್‌ನಲ್ಲಿ ಅತಿ ಹೆಚ್ಚು, ₹ 28,900 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದರು.

‘ಹೂಡಿಕೆದಾರರು ಬಹಳ ಎಚ್ಚರಿಕೆಯಿಂದ ವಹಿವಾಟು ನಡೆಸುತ್ತಿದ್ದಾರೆ.ಜಾಗತಿಕ ವಿದ್ಯಮಾನಗಳು ಮತ್ತು ಭಾರತದಲ್ಲಿನ ಸಾರ್ವತ್ರಿಕ ಚುನಾವಣೆಯ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ’ ಎಂದು ಜಿಯೋಜಿತ್‌ ಫೈನಾನ್ಶಿಯಲ್‌ ಸರ್ವೀಸಸ್‌ನ ಸಂಶೋಧನಾ ಮುಖ್ಯಸ್ಥ ವಿನೋದ್ ನಾಯರ್ ಹೇಳಿದ್ದಾರೆ.

‘ಕಚ್ಚಾ ತೈಲ ದರ ಮತ್ತು ರೂಪಾಯಿ ಮೌಲ್ಯದಲ್ಲಿ ಆಗುತ್ತಿರುವ ಏರಿಳಿತ, ಜಾಗತಿಕ ವಾಣಿಜ್ಯ ಸಮರವು ಹೂಡಿಕೆ ಚಟುವಟಿಕೆಯ ಮೇಲೆ ಪ್ರಭಾವ ಬೀರುತ್ತಿವೆ’ ಎಂದು ಮಾರ್ನಿಂಗ್‌ಸ್ಟಾರ್ ಸಂಸ್ಥೆಯ ಹಿರಿಯ ವಿಶ್ಲೇಷಕ ಹಿಮಾಂಶು ಶ್ರೀವಾಸ್ತವ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT