ಎಫ್‌ಪಿಐ: ನಿಲ್ಲದ ಹೊರಹರಿವು

7

ಎಫ್‌ಪಿಐ: ನಿಲ್ಲದ ಹೊರಹರಿವು

Published:
Updated:

ನವದೆಹಲಿ: ವಿದೇಶಿ ಹೂಡಿಕೆದಾರರು (ಎಫ್‌ಪಿಐ) ಜನವರಿಯಲ್ಲಿ ಬಂಡವಾಳ ಮಾರುಕಟ್ಟೆಯಿಂದ₹ 5,361 ಕೋಟಿ ಹಿಂದಕ್ಕೆ ಪಡೆದಿದ್ದಾರೆ.

₹ 5,264 ಕೋಟಿ ಮೌಲ್ಯದ ಷೇರುಗಳು ಹಾಗೂ ₹ 97 ಕೋಟಿ ಮೌಲ್ಯದ ಸಾಲಪತ್ರಗಳನ್ನು ಮಾರಾಟ ಮಾಡಿದ್ದಾರೆ.

2018ರ ಅಕ್ಟೋಬರ್‌ ತಿಂಗಳಿನಲ್ಲಿ ₹ 28,900 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದರು.

‘ಜಾಗತಿಕ ವಿದ್ಯಮಾನಗಳು, ಸಾರ್ವತ್ರಿಕ ಚುನಾವಣೆ ಇರುವುದರಿಂದ ಹೂಡಿಕೆದಾರರು ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದ್ದಾರೆ’ ಎಂದು ಜಿಯೋಜಿತ್‌ ಫೈನಾನ್ಶಿಯಲ್ ಸರ್ವೀಸಸ್‌ನ ಸಂಶೋಧನಾ ಮುಖ್ಯಸ್ಥ ವಿನೋದ್‌ ನಾಯರ್‌ ಅಭಿಪ್ರಾಯಪಟ್ಟಿದ್ದಾರೆ.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !