ಬೆಂಗಳೂರು: ವಿದೇಶಿ ಬಂಡವಾಳ ಹೂಡಿಕೆದಾರರು (ಎಫ್‌ಪಿಐ) ಮಾಹಿತಿ ತಂತ್ರಜ್ಞಾನ (ಐ.ಟಿ.) ವಲಯದ ಕಂಪನಿಗಳ ಷೇರುಗಳನ್ನು ಹೆಚ್ಚಾಗಿ ಮಾರಾಟ ಮಾಡುತ್ತಿದ್ದಾರೆ ಎಂದು ಜಿಯೋಜಿತ್ ಫೈನಾನ್ಶಿಯಲ್ ಸರ್ವಿಸಸ್‌ನ ಮುಖ್ಯ ಹೂಡಿಕೆ ತಜ್ಞ ವಿ.ಕೆ. ವಿಜಯಕುಮಾರ್ ತಿಳಿಸಿದರು.
ವಾಹನ ಮತ್ತು ವಾಹನ ಬಿಡಿಭಾಗಗಳು, ಹಣಕಾಸು ಸೇವೆಗಳು, ಲೋಹ, ಗಣಿ ಮತ್ತು ವಿದ್ಯುತ್ ವಲಯಗಳಲ್ಲಿ ಹೂಡಿಕೆಗೆ ಗಮನ ಹರಿಸುತ್ತಿದ್ದಾರೆ. ನ್ಯಾಷನಲ್ ಸೆಕ್ಯುರಿಟೀಸ್ ಡೆಪಾಸಿಟರಿ ಲಿಮಿಟೆಡ್‌ನಲ್ಲಿ ಇರುವ ಮಾಹಿತಿಯ ಪ್ರಕಾರ, ಮಾರ್ಚ್ ತಿಂಗಳಿನಲ್ಲಿ ಈವರೆಗೆ ₹6,192 ಕೋಟಿ ಮೊತ್ತದ ಷೇರುಗಳನ್ನು ಖರೀದಿಸಿದ್ದಾರೆ ಎಂದು ಅವರು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.
ಮಾರ್ಚ್‌ನಲ್ಲಿ ಚೀನಾ ಹೊರತು
ಪಡಿಸಿ ಪ್ರವರ್ಧಮಾನಕ್ಕೆ ಬರುತ್ತಿ
ರುವ ಎಲ್ಲಾ ಮಾರುಕಟ್ಟೆಗಳಿಂದಲೂ ಬಂಡವಾಳ ಹಿಂಪಡೆದಿದ್ದಾರೆ. ಅಮೆರಿಕದ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿನ ಅಸ್ಥಿರತೆಯಿಂದ ಜಾಗತಿಕವಾಗಿ ಬ್ಯಾಂಕಿಂಗ್ ಷೇರುಗಳು ಕುಸಿತ ಕಾಣುತ್ತಿವೆ. ಹೀಗಾಗಿ ಅಲ್ಪಾವಧಿಯಲ್ಲಿ
ವಿದೇಶಿ ಹೂಡಿಕೆದಾರರು ಎಚ್ಚರಿಕೆ
ಯಿಂದ ಇರಲಿದ್ದಾರೆ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.