‘ಅಮೆರಿಕದಲ್ಲಿ ಸತತ ಐದನೇ ತಿಂಗಳು ಚಿಲ್ಲರೆ ಹಣದುಬ್ಬರ ಇಳಿಕೆಯಾಗಿದ್ದು, 43 ತಿಂಗಳ ಕನಿಷ್ಠ ಮಟ್ಟವಾದ ಶೇ 2.5ಕ್ಕೆ ತಲುಪಿದೆ. ಮುಂದಿನ ವಾರ ನಡೆಯಲಿರುವ ಹಣಕಾಸು ನೀತಿ ಸಮಿತಿ ಸಭೆಯಲ್ಲಿ ಅಮೆರಿಕದ ಕೇಂದ್ರೀಯ ಬ್ಯಾಂಕ್ ಆದ ಫೆಡರಲ್ ರಿಸರ್ವ್ ಬಡ್ಡಿದರ ಕಡಿತಗೊಳಿಸುವ ನಿರೀಕ್ಷೆ ಹೆಚ್ಚಿದೆ. ಹಾಗಾಗಿ, ಹೂಡಿಕೆ ಏರಿಕೆಯಾಗುತ್ತಿದೆ’ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.