ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಸೆಂಬರ್‌ 1 ರಿಂದ 23ರವರೆಗೆ ಷೇರುಪೇಟೆಯಲ್ಲಿ ₹11,557 ಕೋಟಿ ವಿದೇಶಿ ಹೂಡಿಕೆ

Last Updated 25 ಡಿಸೆಂಬರ್ 2022, 11:17 IST
ಅಕ್ಷರ ಗಾತ್ರ

ನವದೆಹಲಿ: ವಿದೇಶಿ ಹೂಡಿಕೆದಾರರು (ಎಫ್‌ಪಿಐ) ದೇಶದ ಷೇರುಪೇಟೆಗಳಲ್ಲಿ ಡಿಸೆಂಬರ್‌ 1 ರಿಂದ 23ರವರೆಗೆ ನಡೆದ ವಹಿವಾಟಿನಲ್ಲಿ ₹11,557 ಕೋಟಿ ಮೌಲ್ಯದ ಷೇರುಗಳನ್ನು ಖರೀದಿಸಿದ್ದಾರೆ.

ನವೆಂಬರ್‌ ತಿಂಗಳಿನಲ್ಲಿ ₹36,200 ಕೋಟಿ ಮೌಲ್ಯದ ಷೇರುಗಳನ್ನು ಖರೀದಿಸಿದ್ದರು.

‘ಮಾರುಕಟ್ಟೆಯಲ್ಲಿನ ಏರಿಳಿತ ಹಾಗೂ ಚೀನಾ ಮತ್ತು ಜಗತ್ತಿನ ಇನ್ನೂ ಕೆಲವು ಭಾಗಗಳಲ್ಲಿ ಕೋವಿಡ್‌ ಪ್ರಕರಣಗಳು ಮತ್ತೆ ಹೆಚ್ಚಾಗುತ್ತಿರುವ ಆತಂಕದ ನಡುವೆಯೂ ಹೂಡಿಕೆಯನ್ನು ಮುಂದುವರಿಸಿದ್ದಾರೆ’ ಎಂದು ಮಾರ್ನಿಂಗ್‌ಸ್ಟಾರ್ ಇಂಡಿಯಾದ ಸಹಾಯಕ ನಿರ್ದೇಶಕ ಹಿಮಾಂಶು ಶ್ರೀವಾಸ್ತವ ಹೇಳಿದ್ದಾರೆ.

‘ಹೀಗಿದ್ದರೂ ನಿವ್ವಳ ಹೂಡಿಕೆ ಪ್ರಮಾಣವು ಡಿಸೆಂಬರ್‌ 23ಕ್ಕೆ ಕೊನೆಗೊಂಡ ವಾರದಲ್ಲಿ ₹1 ಸಾವಿರ ಕೋಟಿಗೂ ಕಡಿಮೆ ಆಗಿದೆ. ಅದಕ್ಕೂ ಹಿಂದಿನ ವಾರದಲ್ಲಿ ₹6,055 ಕೋಟಿ ಹೂಡಿಕೆ ಮಾಡಿದ್ದರು. ಈಚಿನ ಬೆಳವಣಿಗೆಗಳು ಮತ್ತು ಅನಿಶ್ಚಿತ ಪರಿಸ್ಥಿತಿಗಳಿಂದಾಗಿ ಹೂಡಿಕೆದಾರರು ಎಚ್ಚರಿಕೆಯಿಂದ ವಹಿವಾಟು ನಡೆಸುತ್ತಿದ್ದಾರೆ ಎನ್ನುವುದನ್ನು ನಿವ್ವಳ ಹೂಡಿಕೆಯು ಸೂಚಿಸುತ್ತಿದೆ’ ಎಂದು ಅವರು ತಿಳಿಸಿದ್ದಾರೆ.

‘ಅಮೆರಿಕದ ಆರ್ಥಿಕ ಬೆಳವಣಿಗೆಯ ಅಂಕಿ–ಅಂಶಗಳು ಹಾಗೂ ಕೋವಿಡ್‌ಗೆ ಸಂಬಂಧಿಸಿದ ಬೆಳವಣಿಗೆಗಳು ಅಲ್ಪಾವಧಿಯಲ್ಲಿ ಷೇರುಪೇಟೆಗೆ ವಿದೇಶಿ ಬಂಡವಾಳ ಒಳಹರಿವನ್ನು ನಿರ್ಧರಿಸಲಿವೆ’ ಎಂದು ಜಿಯೋಜಿತ್‌ ಹಣಕಾಸು ಸೇವೆಗಳ ಮುಖ್ಯ ಹೂಡಿಕೆ ತಜ್ಞ ವಿ.ಕೆ. ವಿಜಯಕುಮಾರ್‌ ಹೇಳಿದ್ದಾರೆ.

‘ಡಿಸೆಂಬರ್‌ನಲ್ಲಿ 15 ದಿನಗಳ ವಹಿವಾಟಿನಲ್ಲಿ ವಾಹನ, ಬಂಡವಾಳ ಸರಕು, ಎಫ್‌ಎಂಸಿಜಿ ಮತ್ತು ರಿಯಲ್‌ ಎಸ್ಟೇಟ್‌ ಷೇರುಗಳನ್ನು ಖರೀದಿಸಿದ್ದು, ಗ್ರಾಹಕ ಬಳಕೆ ವಸ್ತುಗಳು, ತೈಲ ಮತ್ತು ಅನಿಲ, ವಿದ್ಯುತ್ ಹಾಗೂ ಹಣಕಾಸು ವಲಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ’ ಎಂದು ವಿಜಯಕುಮಾರ್‌ ಮಾಹಿತಿ ನೀಡಿದ್ದಾರೆ.

2022ರಲ್ಲಿ ಈವರೆಗೆ ಈಕ್ವಿಟಿ ಮಾರುಕಟ್ಟೆಯಿಂದ ₹1.21 ಲಕ್ಷ ಕೋಟಿ ಬಂಡವಾಳವನ್ನು ವಿದೇಶಿ ಹೂಡಿಕೆದಾರರು ಹಿಂದಕ್ಕೆ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT