ನವದೆಹಲಿ: ವಿದೇಶಿ ಬಂಡವಾಳ ಹೂಡಿಕೆದಾರರು (ಎಫ್‌ಪಿಐ) ಆಗಸ್ಟ್ 3ರಿಂದ 14ರ ನಡುವಿನ ಅವಧಿಯಲ್ಲಿ ₹ 28,203 ಕೋಟಿ ಮೌಲ್ಯದ ಷೇರುಗಳು ಮತ್ತು ಸಾಲಪತ್ರಗಳನ್ನು ಖರೀದಿಸಿದ್ದಾರೆ.

ಜಾಗತಿಕ ಮಾರುಕಟ್ಟೆಯಲ್ಲಿ ನಗದು ಹರಿವು ಹೆಚ್ಚಾಗುತ್ತಿದೆ. ಇದರ ಜತೆಗೆ ದೇಶಿ ಕಂಪನಿಗಳ ತ್ರೈಮಾಸಿಕ ಫಲಿತಾಂಶವು ಮಾರುಕಟ್ಟೆ ನಿರೀಕ್ಷೆಗಿಂತಲೂ ಉತ್ತಮವಾಗಿದೆ. ಹೀಗಾಗಿ ಎಫ್‌ಪಿಐ ಒಳಹರಿವು ಹೆಚ್ಚಾಗಿದೆ ಎಂದು ತಜ್ಞರು ವಿಶ್ಲೇಷಣೆ ಮಾಡಿದ್ದಾರೆ.

‘ಜಾಗತಿಕ ಮತ್ತು ದೇಶಿ ವಿದ್ಯಮಾನಗಳು ಹೂಡಿಕೆಯನ್ನು ಪ್ರಭಾವಿಸಿವೆ’ ಎಂದು ಮಾರ್ನಿಂಗ್ ಸ್ಟಾರ್ ಇಂಡಿಯಾದ ಸಹಾಯಕ ನಿರ್ದೇಶಕ ಹಿಮಾಂಶು ಶ್ರೀವಾಸ್ತವ ಅಭಿಪ್ರಾಯಪಟ್ಟಿದ್ದಾರೆ.

‘ಕೋವಿಡ್–19 ಬಿಕ್ಕಟ್ಟಿನಿಂದ ಆರ್ಥಿಕತೆಯನ್ನು ರಕ್ಷಿಸಲು ವಿವಿಧ ದೇಶಗಳ ಕೇಂದ್ರೀಯ ಬ್ಯಾಂಕ್‌ಗಳು ಹಲವು ಉತ್ತೇಜನ ಕ್ರಮಗಳನ್ನು ಘೋಷಿಸಿವೆ. ಇದರಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ನಗದು ಹರಿವು ಹೆಚ್ಚಾಗಿದೆ. ಈ ಹೆಚ್ಚುವರಿ ನಗದು ಭಾರತದಂತಹ ದೇಶಗಳಲ್ಲಿ ಹೂಡಿಕೆಯಾಗುತ್ತಿದೆ’ ಎಂದು ಅವರು ಹೇಳಿದ್ದಾರೆ.

ಹೂಡಿಕೆ ವಿವರ

₹ 26,147 ಕೋಟಿ -ಷೇರುಗಳ ಮೌಲ್ಯ

₹2,056 ಕೋಟಿ -ಸಾಲಪತ್ರಗಳ ಮೌಲ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.