ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಫ್‌ಪಿಐ: ₹ 8,381 ಕೋಟಿ ಹೂಡಿಕೆ

Last Updated 8 ನವೆಂಬರ್ 2020, 11:12 IST
ಅಕ್ಷರ ಗಾತ್ರ

ನವದೆಹಲಿ: ವಿದೇಶಿ ಬಂಡವಾಳ ಹೂಡಿಕೆದಾರರು (ಎಫ್‌ಪಿಐ) ನವೆಂಬರ್‌ 2ರಿಂದ 6ರವರೆಗಿನ ಅವಧಿಯಲ್ಲಿ ದೇಶದ ಬಂಡವಾಳ ಮಾರುಕಟ್ಟೆಯಲ್ಲಿ ₹ 8,381 ಕೋಟಿ ಹೂಡಿಕೆ ಮಾಡಿದ್ದಾರೆ.

ಹೂಡಿಕೆದಾರರು, ಷೇರುಪೇಟೆಯಲ್ಲಿ ₹ 6,564 ಕೋಟಿ ಹಾಗೂ ಸಾಲಪತ್ರಗಳಲ್ಲಿ ₹ 1,817 ಕೋಟಿ ಹೂಡಿಕೆ ಮಾಡಿದ್ದಾರೆ. ಒಟ್ಟಾರೆ ಹೂಡಿಕೆ ₹ 8,381 ಕೋಟಿಗಳಷ್ಟಾಗಿದೆ.‌ ಅಕ್ಟೋಬರ್‌ನಲ್ಲಿ ವಿದೇಶಿ ಬಂಡವಾಳ ಹೂಡಿಕೆದಾರರು ₹ 22,033 ಕೋಟಿ ಹೂಡಿಕೆ ಮಾಡಿದ್ದರು.

ವಾಣಿಜ್ಯ ವಹಿವಾಟುಗಳು ಮತ್ತೆ ಆರಂಭವಾಗಿರುವುದರ ಜತೆಗೆ ಕಂಪನಿಗಳ ತ್ರೈಮಾಸಿಕ ಫಲಿತಾಂಶವೂ ಮಾರುಕಟ್ಟೆ ನಿರೀಕ್ಷೆಗಿಂತ ಉತ್ತಮವಾಗಿದೆ. ಹೀಗಾಗಿ ಬಂಡವಾಳ ಒಳಹರಿವು ಹೆಚ್ಚಾಗುತ್ತಿದೆ ಎಂದು ತಜ್ಞರು ಹೇಳಿದ್ದಾರೆ.

‘ಅಮೆರಿಕದ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶದ ಬಳಿಕ ಭಾರತದ ಮಾರುಕಟ್ಟೆಯಲ್ಲಿ ಹೂಡಿಕೆಯು ಇನ್ನಷ್ಟು ಸ್ಥಿರವಾಗುವ ನಿರೀಕ್ಷೆ ಮಾಡಲಾಗುತ್ತಿದೆ’ ಎಂದು ಗ್ರೋವ್‌ ಸಂಸ್ಥೆಯ ಸಹ ಸ್ಥಾಪಕ ಹರ್ಷ್‌ ಜೈನ್‌ ಅಭಿಪ್ರಾಯಪಟ್ಟಿದ್ದಾರೆ.

‘ಜಾಗತಿಕವಾಗಿ ಕೇಂದ್ರೀಯ ಬ್ಯಾಂಕ್‌ಗಳ ಹೊಂದಾಣಿಕೆಯ ನೀತಿಯಿಂದಾಗಿ ಪ್ರವರ್ಧಮಾನಕ್ಕೆ ಬರುತ್ತಿರುವ ಭಾರತದಂತಹ ದೇಶಗಳಲ್ಲಿ ವಿದೇಶಿ ಹೂಡಿಕೆ ಹೆಚ್ಚಾಗಲಿದೆ’ ಎಂದೂ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT