ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೂನ್‌ ತ್ರೈಮಾಸಿಕ: ಎಫ್‌ಪಿಐ ಪ್ರಮಾಣ ಶೇ 7ರಷ್ಟು ಹೆಚ್ಚಳ

Last Updated 19 ಆಗಸ್ಟ್ 2021, 12:06 IST
ಅಕ್ಷರ ಗಾತ್ರ

ನವದೆಹಲಿ: ವಿದೇಶಿ ಬಂಡವಾಳ ಹೂಡಿಕೆದಾರರು (ಎಫ್‌ಪಿಐ) ದೇಶದ ಷೇರುಗಳಲ್ಲಿ ಹೂಡಿಕೆ ಮಾಡಿರುವ ಹಣದ ಮೌಲ್ಯವು ಜೂನ್‌ ತ್ರೈಮಾಸಿಕದ ಅಂತ್ಯಕ್ಕೆ ₹ 43.80 ಲಕ್ಷ ಕೋಟಿ ಆಗಿದೆ. ಹಿಂದಿನ ಹಣಕಾಸು ವರ್ಷದ ಇದೇ ತ್ರೈಮಾಸಿಕಕ್ಕೆ ಹೋಲಿಸಿದರೆ ಶೇಕಡ 7ರಷ್ಟು ಏರಿಕೆ ಕಂಡಿದೆ ಎಂದು ಮಾರ್ನಿಂಗ್‌ಸ್ಟಾರ್ ಕಂಪನಿ ವರದಿ ಹೇಳಿದೆ.

ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ದೇಶದಲ್ಲಿ ಎಫ್‌ಪಿಐ ಮೊತ್ತ ₹ 40.84 ಲಕ್ಷ ಕೋಟಿ ಆಗಿತ್ತು. ಭಾರತದ ಷೇರುಪೇಟೆಗಳ ಉತ್ತಮ ವಹಿವಾಟಿನಿಂದಾಗಿ ಈ ಪ್ರಮಾಣದಲ್ಲಿ ಹೂಡಿಕೆ ಆಗಿದೆ ಎಂದು ಅದು ಹೇಳಿದೆ.

ಕೋವಿಡ್‌ನ ಎರಡನೇ ಅಲೆಯಿಂದಾಗಿ ವಿದೇಶಿ ಹೂಡಿಕೆದಾರರು ಏಪ್ರಿಲ್‌ ಹಾಗೂ ಮೇನಲ್ಲಿ ಮಾರಾಟಕ್ಕೆ ಗಮನ ನೀಡಿದರು. ಆ ಬಳಿಕ ಕೋವಿಡ್‌ ಪರಿಸ್ಥಿತಿಯು ತುಸು ಸುಧಾರಿಸುತ್ತಿದ್ದಂತೆಯೇ ಜೂನ್‌ನಲ್ಲಿ ₹ 17,464 ಕೋಟಿ ಹೂಡಿಕೆ ಮಾಡಿದರು. ಆದರೆ, ಅಮೆರಿಕದ ಫೆಡರಲ್‌ ರಿಸರ್ವ್‌ ಬಡ್ಡಿದರ ಏರಿಕೆಯ ಸಾಧ್ಯತೆಯನ್ನು ಮುಂದಿಟ್ಟಿದ್ದರಿಂದ ಹಾಗೂ ಕೋವಿಡ್‌ನ ಮೂರನೇ ಅಲೆ ಬರುವ ಸಾಧ್ಯತೆಯಿಂದಾಗಿ ಜುಲೈನಲ್ಲಿ ವಿದೇಶಿ ಹೂಡಿಕೆದಾರರು ಭಾರತದ ಷೇರುಪೇಟೆಯಲ್ಲಿ ಎಚ್ಚರಿಕೆಯ ವಹಿವಾಟು ನಡೆಸಿದರು. ₹ 11,174 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದರು ಎಂದು ವರದಿ ತಿಳಿಸಿದೆ.

ವಿದೇಶಿ ಹೂಡಿಕೆದಾರರು ಭಾರತದ ಷೇರುಪೇಟೆಯ ಬಗ್ಗೆ ನಕಾರಾತ್ಮಕ ಭಾವನೆ ಹೊಂದಿಲ್ಲ. ಬದಲಾಗಿ ಜಾಗರೂಕತೆಯಿಂದ ವಹಿವಾಟು ನಡೆಸುತ್ತಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT