ಶನಿವಾರ, ಜನವರಿ 29, 2022
17 °C

ಬಂಡವಾಳ ಮಾರುಕಟ್ಟೆ: ನವೆಂಬರ್‌ನಲ್ಲಿ ‘ಎಫ್‌ಪಿಐ’ ಒಳಹರಿವು ₹ 5,319 ಕೋಟಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ವಿದೇಶಿ ಬಂಡವಾಳ ಹೂಡಿಕೆದಾರರು (ಎಫ್‌ಪಿಐ) ನವೆಂಬರ್‌ 1 ರಿಂದ 26ರವರೆಗಿನ ಅವಧಿಯಲ್ಲಿ ದೇಶದ ಬಂಡವಾಳ ಮಾರುಕಟ್ಟೆಯಲ್ಲಿ ₹ 5,319 ಕೋಟಿ ಹೂಡಿಕೆ ಮಾಡಿದ್ದಾರೆ. ಅಕ್ಟೋಬರ್‌ನಲ್ಲಿ ₹ 12,437 ಕೋಟಿಗಳಷ್ಟು ಮೌಲ್ಯದ ಷೇರುಗಳನ್ನು ಮತ್ತು ಸಾಲಪತ್ರಗಳನ್ನು ಮಾರಾಟ ಮಾಡಿದ್ದರು.

ಹೂಡಿಕೆದಾರರು ₹ 1,400 ಕೋಟಿ ಮೌಲ್ಯದ ಷೇರುಗಳನ್ನು ಹಾಗೂ ₹ 3,919 ಕೋಟಿ ಮೌಲ್ಯದ ಸಾಲಪತ್ರಗಳನ್ನು ಖರೀದಿಸಿದ್ದಾರೆ. ಇದರಿಂದಾಗಿ ಒಟ್ಟಾರೆ ಹೂಡಿಕೆಯು ₹ 5,319 ಕೋಟಿಗಳಷ್ಟಾಗಿದೆ.

ಕೋವಿಡ್‌ನ ಹೊಸ ತಳಿಯ ಹರಡುವಿಕೆ ಮತ್ತು ಜಾಗತಿಕವಾಗಿ ಆರ್ಥಿಕ ಬೆಳವಣಿಗೆಯ ಮೇಲೆ ಅದರಿಂದ  ಆಗಲಿರುವ ಪರಿಣಾಮಗಳ ಬಗ್ಗೆ ಹೂಡಿಕೆದಾರರು ಗಮನ ಹರಿಸುತ್ತಿದ್ದಾರೆ ಎಂದು ಮಾರ್ನಿಂಗ್‌ಸ್ಟಾರ್‌ ಇಂಡಿಯಾದ ಸಹಾಯಕ ನಿರ್ದೇಶಕ ಹಿಮಾಂಶು ಶ್ರೀವಾಸ್ತವ ಹೇಳಿದ್ದಾರೆ.

ಎಫ್‌ಪಿಐ ಹೆಚ್ಚಿನ ಪ್ರಮಾಣದಲ್ಲಿ ಬ್ಯಾಂಕಿಂಗ್‌ ಷೇರುಗಳನ್ನು ಹೊಂದಿರುವುದರಿಂದ ಈ ವಿಭಾಗದಲ್ಲಿ ಪ್ರಮುಖ ಮಾರಾಟಗಾರರಾಗಿದ್ದಾರೆ. ಅವರು ಬ್ಯಾಂಕಿಂಗ್‌ ಷೇರುಗಳು ನಿರಂತರವಾಗಿ ಮಾರಾಟ ಮಾಡುತ್ತಿರುವುದರಿಂದ ಮೌಲ್ಯದ ದೃಷ್ಟಿಯಿಂದ ಅವು ಹೆಚ್ಚು ಆಕರ್ಷಕವಾಗಿವೆ ಎಂದು ಜಿಯೋಜಿತ್ ಹಣಕಾಸು ಸೇವೆಗಳ ವಿಭಾಗದ ಮುಖ್ಯ ಹೂಡಿಕೆ ತಜ್ಞ ವಿ.ಕೆ. ವಿಜಯಕುಮಾರ್‌ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು